CAA ಭಯ: ಪಶ್ಚಿಮ ಬಂಗಾಳದಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣು!
ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಸುಭಾಷ್‌ಗ್ರಾಮ್‌ನಲ್ಲಿ 37 ವರ್ಷದ ವ್ಯಕ್ತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಘೋಷಣೆಯಾದ ನಂತರ ತನ್ನ ಮಗ ಗಾಬರಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅವರ ತಂದೆ ಹೇಳಿದ್ದಾರೆ.

ಮೃತನನ್ನು ದೇಬಶಿಶ್ ಸೆಂಗುಪ್ತಾ ಎಂದು ಹೇಳಲಾಗಿದೆ. ಈ ವಿಷಯದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ನೇತೃತ್ವದಲ್ಲಿ ನಿಯೋಗವನ್ನು ರಚಿಸಿದೆ. ನಿಯೋಗವು ಗುರುವಾರ ಸಂಜೆ ಮೃತ ದೇಬಶಿಶ್ ಸೆಂಗುಪ್ತಾ ಅವರ ಕುಟುಂಬವನ್ನು ಭೇಟಿ ಮಾಡಿದೆ.

CAA ಜಾರಿಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ; 3 ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ಸೂಚನೆ
ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಸುಭಾಷ್‌ಗ್ರಾಮ್‌ನಲ್ಲಿ 37 ವರ್ಷದ ವ್ಯಕ್ತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಘೋಷಣೆಯಾದ ನಂತರ ತನ್ನ ಮಗ ಗಾಬರಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅವರ ತಂದೆ ಹೇಳಿದ್ದಾರೆ.
ಪೌರತ್ವ ರದ್ದಾಗುವ ಆತಂಕ ದೇಬಾಶಿಶ್ ನನ್ನು ನಿರಂತರವಾಗಿ ಖಿನ್ನತೆಗೆ ಒಳಗಾಗುವಂತೆ ಮಾಡಿದೆ ಎಂದು ದೇಬಾಶಿಶ್ ಸೆಂಗುಪ್ತಾ ಅವರ ಕುಟುಂಬವನ್ನು ಉಲ್ಲೇಖಿಸಿ ತೃಣಮೂಲ ಕಾಂಗ್ರೆಸ್ ಟ್ವಿಟರ್‌ನಲ್ಲಿ ಬರೆದುಕೊಂಡಿದೆ. ಸಿಎಎ ದೃಷ್ಟಿಯಿಂದ ದೇಬಶಿಶ್ ತನ್ನ ಭವಿಷ್ಯದ ಬಗ್ಗೆ ಚಿಂತಿತರಾಗಿದ್ದರು ಎಂದು ಅವರ ಸಂಬಂಧಿಕರು ಹೇಳುತ್ತಾರೆ.
ಟಿಎಂಸಿ ರಾಜಕೀಯ ಮಾಡುತ್ತಿದೆ- ಬಿಜೆಪಿ
ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಸಾವು ದುರದೃಷ್ಟಕರ ಎಂದು ಹೇಳಿದ್ದು ಘಟನೆಯು ಸಿಎಎ ಅಧಿಸೂಚನೆಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು. ಈ ವಿಚಾರದಲ್ಲಿ ಟಿಎಂಸಿ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಮಮತಾ ಬ್ಯಾನರ್ಜಿ ಅವರ ಪಕ್ಷವು ಈಗಾಗಲೇ ಹೆದರುತ್ತಿದೆ ಎಂದು ಇದು ಸ್ಪಷ್ಟಪಡಿಸುತ್ತದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.