ಅಧಿಕಾರ ದುರುಪಯೋಗಕ್ಕೆ ಬಿಜೆಪಿ ಬೆಲೆ ತೆರಬೇಕಾಗುತ್ತದೆ: ಶರದ್ ಪವಾರ್ ಎಚ್ಚರಿಕೆ
ಅಧಿಕಾರ ದುರುಪಯೋಗಕ್ಕೆ ಬಿಜೆಪಿ ಬೆಲೆ ತೆರಬೇಕಾಗುತ್ತದೆ ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ-ಶರದ್ಚಂದ್ರ ಪವಾರ್, ಪಕ್ಷದ ಅಧ್ಯಕ್ಷ ಶರದ್ ಪವಾರ್ ಅವರು ಎಚ್ಚರಿಸಿದ್ದಾರೆ.

ಬಾರಾಮತಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ಶುಕ್ರವಾರ ಖಂಡಿಸಿರುವ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ-ಶರದ್ಚಂದ್ರ ಪವಾರ್, ಪಕ್ಷದ ಅಧ್ಯಕ್ಷ ಶರದ್ ಪವಾರ್ ಅವರು, ಅಧಿಕಾರ ದುರುಪಯೋಗಕ್ಕೆ ಬಿಜೆಪಿ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಇಂದು ಮಹಾರಾಷ್ಟ್ರದ ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶರದ್ ಪವಾರ್, ತುರ್ತು ಪರಿಸ್ಥಿತಿಯಲ್ಲಿ ಜನ ತಮ್ಮ ಶಕ್ತಿ ಪ್ರದರ್ಶಿಸಿದ ರೀತಿಯಲ್ಲೇ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ತಮ್ಮ ಶಕ್ತಿ ತೋರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ಕೇಜ್ರಿವಾಲ್ ಅವರ ಬಂಧನವನ್ನು ಉಲ್ಲೇಖಿಸಿದ ಪವಾರ್, ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕಲು ಫೆಡರಲ್ ಏಜೆನ್ಸಿಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
"ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ. ಖಾತೆಗಳು ಸ್ಥಗಿತಗೊಂಡಿದ್ದರಿಂದ ಚುನಾವಣಾ ಪ್ರಚಾರಕ್ಕಾಗಿ ಹಣಕಾಸು ನಿರ್ವಹಣೆಗೆ ಹೊಡೆತ ಬಿದ್ದಿದೆ. ಇದು ಹಳೆಯ ಪಕ್ಷವನ್ನು ಚುನಾವಣೆಗೆ ಸ್ಪರ್ಧಿಸದಂತೆ ತಡೆಯುವ ಪ್ರಯತ್ನ ಎಂಬುದನ್ನು ತೋರಿಸುತ್ತದೆ. ಈ ಹಿಂದೆ ಯಾವತ್ತೂ ಈ ರೀತಿಯ ಕ್ರಮ ಕೈಗೊಂಡಿರಲಿಲ್ಲ" ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥರು ಹೇಳಿದ್ದಾರೆ.
ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಅವರನ್ನು ಇಡಿ ಗುರುವಾರ ಬಂಧಿಸಿದ್ದು, ಅವರ ಬಂಧನವನ್ನು ಪ್ರತಿಪಕ್ಷ ಇಂಡಿಯಾ ಮೈತ್ರಿಕೂಟದ ನಾಯಕರನ್ನು ಖಂಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



