ಕರ್ಮ ನಿಮ್ಮನ್ನು ಸುತ್ತಿಕೊಳ್ಳುತ್ತೆ: ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಶರ್ಮಿಷ್ಠ ಮುಖರ್ಜಿ ಪ್ರತಿಕ್ರಿಯೆ
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವ ಕ್ರಮಕ್ಕೆ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಮಗಳು ಶರ್ಮಿಷ್ಠಾ ಮುಖರ್ಜಿ ಮಾಡಿರುವ ಟ್ವೀಟ್ ಮಾಡಿದ್ದಾರೆ.

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವ ಕ್ರಮಕ್ಕೆ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಮಗಳು ಶರ್ಮಿಷ್ಠಾ ಮುಖರ್ಜಿ ಮಾಡಿರುವ ಟ್ವೀಟ್ ಮಾಡಿದ್ದಾರೆ.
ಅರವಿಂದ್ ಕೇಜ್ರಿವಾಲ್ ಹಾಗೂ ಅಣ್ಣಾ ಹಜಾರೆ ಅವರು ಆಗಿನ ದೆಹಲಿ ಸಿಎಂ ಮತ್ತು ಕಾಂಗ್ರೆಸ್ ನಾಯಕಿ ಶೀಲಾ ದೀಕ್ಷಿತ್ ಅವರ ವಿರುದ್ಧ ಬೇಜವಾಬ್ದಾರಿಯುತ, ಆಧಾರರಹಿತ ಆರೋಪಗಳನ್ನು ಮಾಡಿದ್ದರು. ಅದಕ್ಕೆ ತಕ್ಕ ಪ್ರತಿಫಲ ಎದುರಿಸಿದ್ದಾರೆ ಎಂದು ಶರ್ಮಿಷ್ಠಾ ಹೇಳಿದ್ದಾರೆ.
ಕಾಂಗ್ರೆಸ್‌ನ ಶೀಲಾ ದೀಕ್ಷಿತ್ ಅವರು ದೆಹಲಿ ಮುಖ್ಯಮಂತ್ರಿಯಾಗಿದ್ದಾಗ ಅವರ ವಿರುದ್ಧ ಅರವಿಂದ್ ಕೇಜ್ರಿವಾಲ್ ಹಾಗೂ ಅಣ್ಣಾ ಹಜಾರೆ ಅವರ ತಂಡವು ಹುರುಳಿಲ್ಲದ ಆರೋಪ ಮಾಡಿತು. ಬೇಜವಾಬ್ದಾರಿಯುತ, ಯಾವುದೇ ಸಾಕ್ಷ್ಯಾಧಾರಗಳು ಇಲ್ಲದ ಆರೋಪಗಳನ್ನು ಇವರೆಲ್ಲ ಮಾಡಿದರು. ಶೀಲಾ ದೀಕ್ಷಿತ್ ಅವರ ವಿರುದ್ಧ ಟ್ರಂಕ್‌ಗಟ್ಟಲೆ ಸಾಕ್ಷ್ಯಾಧಾರಗಳು ಇವೆ ಎಂದು ಇವರು ಹೇಳಿದ್ದರು.
ಆದರೆ, ಒಂದೇ ಒಂದು ದಾಖಲೆಯನ್ನೂ ಇವರು ಬಹಿರಂಗಪಡಿಸಲಿಲ್ಲ. ಆದರೆ, ಕರ್ಮದ ಪ್ರತಿಫಲದಿಂದಾಗಿ ಇಂದು ಅರವಿಂದ್ ಕೇಜ್ರಿವಾಲ್ ಅವರು ಜೈಲುಪಾಲಾಗಿದ್ದಾರೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



