ದೇಶ

ಕಾಸಿಗಾಗಿ ಪ್ರಶ್ನೆ ಪ್ರಕರಣ: TMC ಸಂಸದೆ ಮಹುವಾ ಮೊಯಿತ್ರಾ ನಿವಾಸ, ಕಚೇರಿಗಳ ಮೇಲೆ ಸಿಬಿಐ ದಾಳಿ

ಕಾಸಿಗಾಗಿ ಪ್ರಶ್ನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್‌ನ ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರ ಕಚೇರಿ ಮತ್ತು ನಿವಾಸಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಿದ್ದಾರೆ.

ಕಾಸಿಗಾಗಿ ಪ್ರಶ್ನೆ ಪ್ರಕರಣ: TMC ಸಂಸದೆ ಮಹುವಾ ಮೊಯಿತ್ರಾ ನಿವಾಸ, ಕಚೇರಿಗಳ ಮೇಲೆ ಸಿಬಿಐ ದಾಳಿ
ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ
Published On :

ನವದೆಹಲಿ: ಕಾಸಿಗಾಗಿ ಪ್ರಶ್ನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್‌ನ ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರ ಕಚೇರಿ ಮತ್ತು ನಿವಾಸಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಿದ್ದಾರೆ.

ಕಾಸಿಗಾಗಿ ಪ್ರಶ್ನೆ ಪ್ರಕರಣ ಸಂಬಂಧ ಲೋಕಪಾಲ್‌ ನಿರ್ದೇಶನದ ಮೇಲೆ ಸಿಬಿಐ, ಮಹುವಾ ಮೊಯಿತ್ರಾ ವಿರುದ್ಧ ಶುಕ್ರವಾರ ಎಫ್‌ಐಆರ್‌ ದಾಖಲಿಸಿತ್ತು. ಶನಿವಾರ ಬೆಳಗ್ಗೆ ಮಹುವಾ ಮೊಯಿತ್ರಾ ಅವರ ಕೋಲ್ಕತ್ತ ನಿವಾಸ, ಕಚೇರಿ ಸೇರಿದಂತೆ ದೆಹಲಿ ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ದಾಖಲೆ ಪತ್ರಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಎಂದು ಸಿಬಿಐ ಮೂಲಗಳ ತಿಳಿಸಿವೆ.

6 ತಿಂಗಳೊಳಗೆ ವರದಿ ನೀಡುವಂತೆ ಲೋಕಪಾಲ್ ಸೂಚನೆ

ಇನ್ನು ಈ ಪ್ರಕರಣವನ್ನು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿ, ಆರು ತಿಂಗಳೊಳಗೆ ವರದಿ ನೀಡಬೇಕು ಹಾಗೂ ತನಿಖೆಯ ಪ್ರಗತಿ ಬಗ್ಗೆ ಮಾಸಿಕ ವರದಿಯನ್ನು ನೀಡಬೇಕು ಎಂದು ಲೋಕಪಾಲ್‌ ಸಿಬಿಐಗೆ ನಿರ್ದೇಶಿಸಿದೆ.

ಏನಿದು ಪ್ರಕರಣ?

ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಉದ್ಯಮಿ ಗೌತಮ್ ಅದಾನಿ ವಿರುದ್ಧ ಮಾತನಾಡಲು ಮಹುವಾ ಮೊಯಿತ್ರಾ ಅವರು ದುಬೈ ಮೂಲದ ಉದ್ಯಮಿ ದರ್ಶನ್ ಹಿರಾನಂದಾನಿಯಿಂದ ಹಣ ಹಾಗೂ ಉಡುಗೊರೆಗಳನ್ನು ಪಡೆದಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆರೋಪಿಸಿದ್ದರು. ಈ ಬಗ್ಗೆ ತನಿಖೆ ನಡೆಸಿದ್ದ ಸದನದ ನೀತಿ ಸಮಿತಿ, ಮಹುವಾ ಮೋಯಿತ್ರಾ ಅವರನ್ನು ಉಚ್ಚಾಟಿಸಬೇಕು ಎಂದು ವರದಿ ನೀಡಿತ್ತು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು. ಈ ಲೋಕಸಭೆ ಚುನಾವಣೆಗೆ ಕೃಷ್ಣನಗರ ಕ್ಷೇತ್ರದಿಂದ ಮತ್ತೆ ಮಹುವಾ ಅವರಿಗೆ ಟಿಎಂಸಿ ಟಿಕೆಟ್ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.