ಇ.ಡಿ ಕಸ್ಟಡಿಯಿಂದಲೇ ಮೊದಲ ಸರ್ಕಾರಿ ನಿರ್ದೇಶನ ಹೊರಡಿಸಿದ ದೆಹಲಿ ಸಿಎಂ ಕೇಜ್ರಿವಾಲ್!
ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು. ಜೈಲಿನಿಂದಲೇ ತಮ್ಮ ಮೊದಲ ಸರ್ಕಾರಿ ಆದೇಶವನ್ನು ಹೊರಡಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ.

ನವದೆಹಲಿ: ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು. ಜೈಲಿನಿಂದಲೇ ತಮ್ಮ ಮೊದಲ ಸರ್ಕಾರಿ ಆದೇಶವನ್ನು ಹೊರಡಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ರಾಷ್ಟ್ರ ರಾಜಧಾನಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿನ ಅವರ ಅಧಿಕೃತ ನಿವಾಸದಲ್ಲಿ ಶೋಧದ ನಂತರ ಅಕ್ರಮ ಹಣ ವರ್ಗಾವಣೆ ತಡೆ ಕಾನೂನಿನ ಅಡಿಯಲ್ಲಿ ಇಡಿ ಬಂಧನ ಮಾಡಿತ್ತು.
ಆಪಾದಿತ ಮದ್ಯ ಹಗರಣದಲ್ಲಿ ಅವರ ಪಾತ್ರದ ಕುರಿತು "ವಿವರವಾದ ಮತ್ತು ನಿರಂತರ ವಿಚಾರಣೆ" ಗಾಗಿ ಶುಕ್ರವಾರ ಅವರನ್ನು ಮಾರ್ಚ್ 28 ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಲಾಗಿದೆ.
ಕೇಜ್ರಿವಾಲ್ ಅವರ ಬಂಧನ ಆದ ಕ್ಷಣದಿಂದ ಪಕ್ಷದ ನಾಯಕರು ಅರವಿಂದ್ ಕೇಜ್ರಿವಾಲ್ ಅವರೇ ಮುಖ್ಯಮಂತ್ರಿಯಾಗಿ ಉಳಿಯಲಿದ್ದಾರೆ ಎಂದಿದ್ದರು, ಅಗತ್ಯ ಬಿದ್ದಲ್ಲಿ ಸರ್ಕಾರವನ್ನು ಜೈಲಿನಿಂದಲೇ ನಡೆಸಲಿದ್ದಾರೆ ಎಂದು ತಿಳಿಸಿದ್ದರು.
ಇದರ ಬೆನ್ನಲ್ಲೇ ಕೇಜ್ರಿವಾಲ್ ಅವರು ದೆಹಲಿ ಸರ್ಕಾರದ ಮೊದಲ ನಿರ್ದೇಶನವನ್ನು ಹೊರಡಿಸಿದ್ದಾರೆ. ಇದು ಜಲ ಇಲಾಖೆಗೆ ಸಂಬಂಧಪಟ್ಟದ್ದಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಜಲ ಸಚಿವೆ ಅತಿಶಿ ಅವರು ಇಂದು ಆದೇಶದ ಕುರಿತು ಪ್ರಕಟಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಈ ನಡುವೆ ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರು ಶನಿವಾರ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಹೋಳಿ ರಜೆಯ ಕಾರಣ ನ್ಯಾಯಾಲಯವು ಇದೇ 27ಕ್ಕೂ ಮೊದಲು ಈ ಅರ್ಜಿ ವಿಚಾರಣೆ ನಡೆಸುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



