ದೇಶ

ತಮಿಳುನಾಡು: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ; ಡಿಎಂಕೆ ಸಚಿವರ ವಿರುದ್ಧ ಎಫ್‌ಐಆರ್ ದಾಖಲು

ಬಿಜೆಪಿ ದಕ್ಷಿಣ ಜಿಲ್ಲಾಧ್ಯಕ್ಷ ಚಿತ್ರಾಂಗತನ್ ನೀಡಿದ ದೂರಿನ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ತಮಿಳುನಾಡು ಮೀನುಗಾರಿಕೆ, ಮೀನುಗಾರರ ಕಲ್ಯಾಣ ಮತ್ತು ಪಶುಸಂಗೋಪನೆ ಸಚಿವ ಅನಿತಾ ಆರ್ ರಾಧಾಕೃಷ್ಣನ್ ವಿರುದ್ಧ ತೂತುಕುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಮಿಳುನಾಡು: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ; ಡಿಎಂಕೆ ಸಚಿವರ ವಿರುದ್ಧ ಎಫ್‌ಐಆರ್ ದಾಖಲು
ಸಚಿವ ಅನಿತಾ ಆರ್ ರಾಧಾಕೃಷ್ಣನ್
Published On :

ತೂತುಕುಡಿ: ಬಿಜೆಪಿ ದಕ್ಷಿಣ ಜಿಲ್ಲಾಧ್ಯಕ್ಷ ಚಿತ್ರಾಂಗತನ್ ನೀಡಿದ ದೂರಿನ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ತಮಿಳುನಾಡು ಮೀನುಗಾರಿಕೆ, ಮೀನುಗಾರರ ಕಲ್ಯಾಣ ಮತ್ತು ಪಶುಸಂಗೋಪನೆ ಸಚಿವ ಅನಿತಾ ಆರ್ ರಾಧಾಕೃಷ್ಣನ್ ವಿರುದ್ಧ ತೂತುಕುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಪತಿ ಅವರಿಗೆ ಸಲ್ಲಿಸಿರುವ ದೂರಿನ ಪ್ರಕಾರ, ಮಾರ್ಚ್ 22ರಂದು ತಾಂಡಪಥುವಿನಲ್ಲಿ ನಡೆದ ಡಿಎಂಕೆ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮೀನುಗಾರಿಕಾ ಸಚಿವರು ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಧಾಕೃಷ್ಣನ್ ಅವರ ಹೇಳಿಕೆ ಅಸಹ್ಯಕರ, ಹೇಯ ಮತ್ತು ಅಸಂಸದೀಯವಾಗಿದೆ. ತಮ್ಮ ಸೇಲಂ ರೋಡ್‌ಶೋನಲ್ಲಿ ದಿವಂಗತ ಮುಖ್ಯಮಂತ್ರಿ ಕಾಮರಾಜರನ್ನು ಹೊಗಳಿದ್ದಕ್ಕಾಗಿ ಅವರು ಮೋದಿಯನ್ನು ಕೆಟ್ಟದಾಗಿ ಟೀಕಿಸಿದ್ದಾರೆ ಎಂದು ಚಿತ್ರಾಂಗತನ್ ತಿಳಿಸಿದ್ದಾರೆ.

ಇದು ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘನೆಯಾಗಿದ್ದು, ಸಚಿವರು ಮತ್ತು ಸಭೆಯ ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಚಿತ್ರಾಂಗತನ್ ಅವರ ದೂರಿನ ಮೇರೆಗೆ ಮೇಘನಪುರಂ ಪೊಲೀಸರು ರಾಧಾಕೃಷ್ಣನ್ ವಿರುದ್ಧ ಐಪಿಸಿ ಸೆಕ್ಷನ್ 294 (ಬಿ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಈ ವಿಷಯವನ್ನು ಚುನಾವಣಾ ಆಯೋಗ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಕೊಂಡೊಯ್ಯುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಎಕ್ಸ್‌ನಲ್ಲಿ ಹೇಳಿರುವುದನ್ನು ಗಮನಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.