ದೇಶ

ಕೇರಳ: ದೇಗುಲ ಉತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಐದು ವರ್ಷದ ಬಾಲಕಿ ಸಾವು

ಕೊಲ್ಲಂ ಸಮೀಪದ ಪ್ರಸಿದ್ಧ ಕೊಟ್ಟನ್‌ಕುಲಂಗರ ದೇವಸ್ಥಾನದಲ್ಲಿ ವಾರ್ಷಿಕ ಉತ್ಸವದ ವೇಳೆ ರಥದ ಚಕ್ರದಡಿ ಸಿಲುಕಿ ಐದು ವರ್ಷದ ಮಗುವೊಂದು ನಿನ್ನೆ ರಾತ್ರಿ ಸಾವಿಗೀಡಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇರಳ: ದೇಗುಲ ಉತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಐದು ವರ್ಷದ ಬಾಲಕಿ ಸಾವು
ಪ್ರಾತಿನಿಧಿಕ ಚಿತ್ರ
Published On :

ಕೊಲ್ಲಂ: ಇಲ್ಲಿಗೆ ಸಮೀಪದ ಪ್ರಸಿದ್ಧ ಕೊಟ್ಟನ್‌ಕುಲಂಗರ ದೇವಸ್ಥಾನದಲ್ಲಿ ವಾರ್ಷಿಕ ಉತ್ಸವದ ವೇಳೆ ರಥದ ಚಕ್ರದಡಿ ಸಿಲುಕಿ ಐದು ವರ್ಷದ ಮಗುವೊಂದು ನಿನ್ನೆ ರಾತ್ರಿ ಸಾವಿಗೀಡಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಕ್ತರು ರಥವನ್ನು ಎಳೆಯುತ್ತಿದ್ದ ವೇಳೆ ರಥದ ದೊಡ್ಡ ಚಕ್ರಗಳ ಅಡಿಯಲ್ಲಿ ಆಕಸ್ಮಿಕವಾಗಿ ಬಿದ್ದು ಚವರ ನಿವಾಸಿಗಳಾದ ದಂಪತಿ ಪುತ್ರಿ ಪ್ರಾಣ ಕಳೆದುಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ರಾತ್ರಿ 11.30ರ ಸುಮಾರಿಗೆ ಅವಘಡ ಸಂಭವಿಸಿದೆ. ಆಕೆ ತನ್ನ ಪೋಷಕರೊಂದಿಗೆ ದೇವಸ್ಥಾನಕ್ಕೆ ಬಂದಿದ್ದಳು. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ಕೆಲವೊಮ್ಮೆ ಮಕ್ಕಳು ಕೂಡ ರಥಕ್ಕೆ ಕಟ್ಟಿದ ಹಗ್ಗವನ್ನು ಎಳೆಯುತ್ತಾರೆ. ಈ ವೇಳೆ ಆಕೆ ಆಕಸ್ಮಿಕವಾಗಿ ಬಿದ್ದಿದ್ದಾಳೆಂದು ತೋರುತ್ತದೆ' ಎಂದು ಪೊಲೀಸರು ಹೇಳಿದರು.

ಘಟನೆ ನಡೆದ ಕೂಡಲೇ ಮಗುವನ್ನು ಪೋಷಕರು ಮತ್ತು ಪೊಲೀಸರು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಆ ವೇಳೆಗಾಗಲೇ ಸಾವಿಗೀಡಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.