ಬಿಆರ್‌ಎಸ್ ನಾಯಕಿ ಕವಿತಾಗೆ 14 ದಿನಗಳ ನ್ಯಾಯಾಂಗ ಬಂಧನ
ದೆಹಲಿಯ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಭಾರತ್ ರಾಷ್ಟ್ರ ಸಮಿತಿ ನಾಯಕಿ ಕೆ ಕವಿತಾ ಅವರನ್ನು ನವದೆಹಲಿಯ ನ್ಯಾಯಾಲಯ ಮಂಗಳವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಕಸ್ಟಡಿ ವಿಚಾರಣೆ ವಿಸ್ತರಿಸಲು ಜಾರಿ ನಿರ್ದೇಶನಾಲಯ (ಇಡಿ) ಕೋರದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಈ ಆದೇಶ ಹೊರಡಿಸಿದ್ದಾರೆ.

ನವದೆಹಲಿ: ದೆಹಲಿಯ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಭಾರತ್ ರಾಷ್ಟ್ರ ಸಮಿತಿ ನಾಯಕಿ ಕೆ ಕವಿತಾ ಅವರನ್ನು ನವದೆಹಲಿಯ ನ್ಯಾಯಾಲಯ ಮಂಗಳವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಕಸ್ಟಡಿ ವಿಚಾರಣೆ ವಿಸ್ತರಿಸಲು ಜಾರಿ ನಿರ್ದೇಶನಾಲಯ (ಇಡಿ) ಕೋರದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಈ ಆದೇಶ ಹೊರಡಿಸಿದ್ದಾರೆ.
ಮಾರ್ಚ್ 16 ರಂದು ಏಳು ದಿನಗಳ ಇಡಿ ಕಸ್ಟಡಿಗೆ ಕವಿತಾ ಅವರನ್ನು ಒಪ್ಪಿಸಲಾಗಿತ್ತು. ಕಳೆದ ಶನಿವಾರ ಅದನ್ನು ಮೂರು ದಿನಗಳವರೆಗೆ ವಿಸ್ತರಿಸಲಾಗಿತ್ತು. ವಿಚಾರಣೆ ಸಂದರ್ಭದಲ್ಲಿ ಅಪ್ರಾಪ್ತ ಮಗನ ಪರೀಕ್ಷೆಯ ಆಧಾರದ ಮೇಲೆ ಮಧ್ಯಂತರ ಜಾಮೀನು ನೀಡುವಂತೆ ಕವಿತಾ ಪರ ವಕೀಲ ನಿತೇಶ್ ರಾಣಾ ಕೋರಿದರು. ಮಧ್ಯಂತರ ಜಾಮೀನನ್ನು ಪರಿಗಣಿಸಬೇಕಿದ್ದರೂ ಉತ್ತರ ಸಲ್ಲಿಸಲು ಅವಕಾಶ ನೀಡಬೇಕು ಎಂದು ಇಡಿ ಪರ ವಕೀಲರು ಹೇಳಿದರು. ಮಧ್ಯಂತರ ಮತ್ತು ನಿಯಮಿತ ಜಾಮೀನು ಎರಡಕ್ಕೂ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಕಠಿಣ ನಿಬಂಧನೆಗಳಿವೆ ಎಂದು ಇಡಿ ಹೇಳಿತು.
ದೆಹಲಿ ಅಬಕಾರಿ ನೀತಿಯಲ್ಲಿ ದೊಡ್ಡ ಪಾಲಿಗಾಗಿ ಎಎಪಿಗೆ 100 ಕೋಟಿ ರೂ. ಕಿಕ್ ಬ್ಯಾಕ್ ಪಾವತಿಯಲ್ಲಿ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅವರು 'ಸೌತ್ ಗ್ರೂಪ್' ನ ಪ್ರಮುಖ ಸದಸ್ಯೆಯಾಗಿದ್ದಾರೆ ಎಂದು ಇಡಿ ಆರೋಪಿಸಿದೆ. 14 ವರ್ಷದ ಕವಿತಾ ಅವರನ್ನು ಮಾರ್ಚ್ 15 ರಂದು ಕೇಂದ್ರ ತನಿಖಾ ಸಂಸ್ಥೆ ಬಂಧಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



