ಛತ್ತೀಸ್‌ಗಢ ಎನ್‌ಕೌಂಟರ್: ಗುಂಡಿನ ಕಾಳಗದಲ್ಲಿ ಇಬ್ಬರು ಮಹಿಳೆಯರು ಸೇರಿ 6 ನಕ್ಸಲರು ಹತ
ಬಿಜಾಪುರದ ಹರಿತ ಜಿಲ್ಲೆಯ ಚಿಪುರ್‌ಭಟ್ಟಿ ಪ್ರದೇಶದಲ್ಲಿ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಹಿಳಾ ಕಾರ್ಯಕರ್ತರು ಸೇರಿದಂತೆ ಆರು ಬಂಡುಕೋರರನ್ನು ಭದ್ರತಾ ಪಡೆ ಹೊಡೆದುರುಳಿಸಿವೆ.

ರಾಯ್‌ಪುರ: ರಾಯ್‌ಪುರದಿಂದ ಸುಮಾರು 350 ಕಿಮೀ ದೂರದಲ್ಲಿರುವ ಬಿಜಾಪುರದ ಹರಿತ ಜಿಲ್ಲೆಯ ಚಿಪುರ್‌ಭಟ್ಟಿ ಪ್ರದೇಶದಲ್ಲಿ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಹಿಳಾ ಕಾರ್ಯಕರ್ತರು ಸೇರಿದಂತೆ ಕಾನೂನುಬಾಹಿರ ಸಿಪಿಐ(ಮಾವೋವಾದಿ)ನ ಆರು ಬಂಡುಕೋರರನ್ನು ಭದ್ರತಾ ಪಡೆ ಹೊಡೆದುರುಳಿಸಿವೆ.
ಬಿಜಾಪುರ ಪೊಲೀಸರ ಪ್ರಕಾರ, ಮಾವೋವಾದಿಗಳು ಈ ಪ್ರದೇಶದಲ್ಲಿ ಮೂವರು ಗ್ರಾಮಸ್ಥರನ್ನು ಕೊಂದ ನಂತರ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್), ಎಲೈಟ್ ಕೋಬ್ರಾ ಘಟಕ ಮತ್ತು ಜಿಲ್ಲಾ ರಿಸರ್ವ್ ಗಾರ್ಡ್‌ಗಳ (ಡಿಆರ್‌ಜಿ) ಜಂಟಿ ತಂಡ ಶೋಧ ಕಾರ್ಯಾಚರಣೆ ಪ್ರಾರಂಭಿಸಿತು.
"ಈ ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಸುಳಿವು ನೀಡಿದ ನಂತರ ಭದ್ರತಾ ಪಡೆಗಳು ಮಂಗಳವಾರ ತಡರಾತ್ರಿ ಕಾರ್ಯಾಚರಣೆಗೆ ತೆರಳಿದವು. ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ಸಂಭವಿಸಿದೆ. ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿಯ(ಪಿಎಲ್‌ಜಿಎ) 10 ಮಾವೋವಾದಿಗಳು ತಲ್ಪೆರು ನದಿಯ ಸಮೀಪದಲ್ಲಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಟಿಎನ್‌ಐಇಗೆ ತಿಳಿಸಿದ್ದಾರೆ.
ಇದುವರೆಗೆ ಆರು ಮೃತದೇಹಗಳನ್ನು ಭದ್ರತಾ ಪಡೆಗಳು ಹೊರತೆಗೆದಿದ್ದು, ಇನ್ನೂ ಗುರುತು ಪತ್ತೆಯಾಗಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಎನ್‌ಕೌಂಟರ್‌ನ ನಂತರ ಹಲವಾರು ಮಾವೋವಾದಿಗಳು ಗಾಯಗೊಂಡಿರುವ ಸಾಧ್ಯತೆಯಿದೆ ಎಂದು ಭದ್ರತಾ ಪಡೆಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



