ದೇಶ

ಫೆಮಾ ಪ್ರಕರಣ: ನಾಳೆ ವಿಚಾರಣೆಗೆ ಹಾಜರಾಗುವಂತೆ ಮಹುವಾ ಮೊಯಿತ್ರಾಗೆ ಇಡಿ ಸಮನ್ಸ್

ಫೆಮಾ ಉಲ್ಲಂಘನೆ ಪ್ರಕರಣದಲ್ಲಿ ಮಾರ್ಚ್ 28 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ(ಇಡಿ), ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರಿಗೆ ಹೊಸ ಸಮನ್ಸ್ ಜಾರಿ ಮಾಡಿದೆ.

ಫೆಮಾ ಪ್ರಕರಣ: ನಾಳೆ ವಿಚಾರಣೆಗೆ ಹಾಜರಾಗುವಂತೆ ಮಹುವಾ ಮೊಯಿತ್ರಾಗೆ ಇಡಿ ಸಮನ್ಸ್
ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ
Published On :

ನವದೆಹಲಿ: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೆಮಾ) ಉಲ್ಲಂಘನೆ ಪ್ರಕರಣದಲ್ಲಿ ಮಾರ್ಚ್ 28 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ(ಇಡಿ), ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಮತ್ತು ಉದ್ಯಮಿ ದರ್ಶನ್ ಹಿರಾನಂದನಿ ಅವರಿಗೆ ಹೊಸ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.

49 ವರ್ಷದ ತೃಣಮೂಲ ಕಾಂಗ್ರೆಸ್ ನಾಯಕಿಯನ್ನು ಕೇಂದ್ರೀಯ ತನಿಖಾ ಸಂಸ್ಥೆ ಈ ಹಿಂದೆಯೂ ವಿಚಾರಣೆಗೆ ಕರೆದಿತ್ತು.

ಮೊಯಿತ್ರಾ ವಿರುದ್ಧದ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರ ಆರೋಪಗಳ ಕುರಿತು ತನಿಖೆ ನಡೆಸುವಂತೆ ಭ್ರಷ್ಟಾಚಾರ-ನಿಗ್ರಹ ಒಂಬುಡ್ಸ್‌ಮನ್ ಲೋಕಪಾಲ್ ಸಿಬಿಐಗೆ ನಿರ್ದೇಶನ ನೀಡಿದ ಕೆಲವು ದಿನಗಳ ನಂತರ, ಶನಿವಾರ ಕೇಂದ್ರ ತನಿಖಾ ಸಂಸ್ಥೆ(ಸಿಬಿಐ) ಪ್ರಶ್ನೆಗಾಗಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ನಾಯಕಿಯ ನಿವಾಸದ ಮೇಲೆ ದಾಳಿ ನಡೆಸಿತ್ತು.

ಲೋಕಸಭೆಯಲ್ಲಿ ಪ್ರಶ್ನೆ ಕೇಳುವುದಕ್ಕೆ ಲಂಚ ಪಡೆದ ಆರೋಪದ ಮೇಲೆ ಮಹುವಾ ಮೊಯಿತ್ರಾ ಅವರನ್ನು ಸಂಸದ ಸ್ಥಾನದಿಂದ ಉಚ್ಚಾಟಿಸಲಾಗಿದೆ.

ಮೊಯಿತ್ರಾ ಅವರು ಹಣಕ್ಕಾಗಿ ರಾಷ್ಟ್ರೀಯ ಭದ್ರತೆಯಲ್ಲಿ ರಾಜಿ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.