ದೇಶ

ಜೈಲಿನಿಂದ ಸರ್ಕಾರ ನಡೆಸಲಾಗುವುದಿಲ್ಲ: ದೆಹಲಿ ಲೆಫ್ಟಿನೆಂಟ್ ಗವರ್ನರ್

ಸರ್ಕಾರವನ್ನು ಜೈಲಿನಿಂದ ನಡೆಸಲಾಗುವುದಿಲ್ಲ ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೆನಾ ಅವರು ಬುಧವಾರ ಹೇಳಿದ್ದಾರೆ.

ಜೈಲಿನಿಂದ ಸರ್ಕಾರ ನಡೆಸಲಾಗುವುದಿಲ್ಲ: ದೆಹಲಿ ಲೆಫ್ಟಿನೆಂಟ್ ಗವರ್ನರ್
ಅರವಿಂದ್ ಕೇಜ್ರಿವಾಲ್ - ವಿ ಕೆ ಸಕ್ಸೆನಾ
Published On :

ನವದೆಹಲಿ: ಸರ್ಕಾರವನ್ನು ಜೈಲಿನಿಂದ ನಡೆಸಲಾಗುವುದಿಲ್ಲ ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೆನಾ ಅವರು ಬುಧವಾರ ಹೇಳಿದ್ದಾರೆ.

ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ್ದು, ತಮ್ಮ ನಾಯಕ ಜೈಲಿನಿಂದಲೇ ಸರ್ಕಾರ ನಡೆಸುತ್ತಾರೆ ಎಂದು ಎಎಪಿ ನಾಯಕರ ಹೇಳಿಕೆಗಳ ಹಿನ್ನೆಲೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಅವರು ಸ್ಪಷ್ಟನೆ ನೀಡಿದ್ದಾರೆ.

ಟೈಮ್ಸ್ ನೌ ಶೃಂಗಸಭೆಯಲ್ಲಿ ಮಾತನಾಡಿದ ಸಕ್ಸೆನಾ, “ಸರ್ಕಾರವನ್ನು ಜೈಲಿನಿಂದ ನಡೆಸಲಾವುದಿಲ್ಲ ಎಂದು ನಾನು ದೆಹಲಿಯ ಜನರಿಗೆ ಭರವಸೆ ನೀಡಬಲ್ಲೆಎಂದಿದ್ದಾರೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿದ್ದು, ನಂತರ ದೆಹಲಿ ನ್ಯಾಯಾಲಯ ಅವರನ್ನು ಮಾರ್ಚ್ 28 ರವರೆಗೆ ಇಡಿ ಕಸ್ಟಡಿಗೆ ಒಪ್ಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.