'ಲೋಕ' ಚುನಾವಣೆಗೂ ಮುನ್ನ ಸಿಎಂ ಪಟ್ನಾಯಕ್‌ಗೆ ಶಾಕ್: ಆರು ಬಾರಿ ಗೆಲುವು ಸಾಧಿಸಿದ್ದ BJD ಸಂಸದ ಬಿಜೆಪಿಗೆ ಸೇರ್ಪಡೆ
ಮುಂಬರುವ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಮುನ್ನ ಒಡಿಶಾದ ಆಡಳಿತಾರೂಢ ಬಿಜು ಜನತಾ ದಳ (BJD) ದೊಡ್ಡ ಹಿನ್ನಡೆಯಾಗಿದ್ದು ಕಟಕ್ ಸಂಸದ ಮತ್ತು ಪಕ್ಷದ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ಭರ್ತ್ರಿಹರಿ ಮಹತಾಬ್ ಇಂದು ಬಿಜೆಪಿ ಸೇರಿದ್ದಾರೆ.

ಮುಂಬರುವ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಮುನ್ನ ಒಡಿಶಾದ ಆಡಳಿತಾರೂಢ ಬಿಜು ಜನತಾ ದಳ (BJD) ದೊಡ್ಡ ಹಿನ್ನಡೆಯಾಗಿದ್ದು ಕಟಕ್ ಸಂಸದ ಮತ್ತು ಪಕ್ಷದ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ಭರ್ತ್ರಿಹರಿ ಮಹತಾಬ್ ಇಂದು ಬಿಜೆಪಿ ಸೇರಿದ್ದಾರೆ.
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ, ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್ ಜೈ ಪಾಂಡಾ ಮತ್ತು ರಾಜ್ಯಾಧ್ಯಕ್ಷ ಮನಮೋಹನ್ ಸಮಾಲ್ ಅವರ ಸಮ್ಮುಖದಲ್ಲಿ ಮಹತಾಬ್ ಬಿಜೆಪಿ ಸದಸ್ಯತ್ವ ಪಡೆದರು.
ಕಟಕ್ ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿದ್ದ ಮಹತಾಬ್ ಅವರು ಮಾರ್ಚ್ 22ರಂದು ಬಿಜೆಡಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಬಿಜೆಡಿಯಲ್ಲಿ ಸ್ವತಂತ್ರವಾಗಿ ಕೆಲಸ ಮಾಡಲು ಸೂಕ್ತ ಅವಕಾಶ ಸಿಕ್ಕಿಲ್ಲ ಎಂದು ಆರೋಪಿಸಿದ್ದರು. ಅಂದಿನಿಂದ ಅವರು ಬಿಜೆಪಿ ಸೇರುವ ಬಗ್ಗೆ ಊಹಾಪೋಹಗಳು ಹಬ್ಬಿದ್ದವು. ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ, ಬಿಜೆಡಿ ಲೋಕಸಭೆ ಚುನಾವಣೆಗೆ ಮಹತಾಬ್ ಅವರ ಟಿಕೆಟ್ ಅನ್ನು ರದ್ದುಗೊಳಿಸಿತ್ತು. ಕಟಕ್‌ನಲ್ಲಿ, ಬಿಜೆಡಿ ಮಹತಾಬ್ ಬದಲಿಗೆ ಸಂರತ್ ಮಿಶ್ರಾ ಅವರನ್ನು ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ.
ಇದಕ್ಕೂ ಮುನ್ನ ಮಾರ್ಚ್ 2ರಂದು ಐದು ಬಾರಿ ಬಿಜು ಜನತಾ ದಳದ ಶಾಸಕ ಅರಬಿಂದ್ ಧಾಲಿ ಅವರು ಆಡಳಿತಾರೂಢ ಬಿಜು ಜನತಾ ದಳಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲದೆ ಬಿಜೆಪಿಗೆ ಸೇರುವುದಾಗಿ ಹೇಳಿದ್ದರು. ಧಾಲಿ ಒಡಿಶಾದ ಖೋರ್ಧಾ ಜಿಲ್ಲೆಯ ಜೈದೇವ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. ಅವರು ತಮ್ಮ ರಾಜೀನಾಮೆಯನ್ನು ಬಿಜೆಡಿ ಅಧ್ಯಕ್ಷ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ಕಳುಹಿಸಿದ್ದರು. 1992ರಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಗೆದ್ದು ಮೊದಲ ಬಾರಿಗೆ ಧಾಳಿ ವಿಧಾನಸಭೆಗೆ ಬಂದಿದ್ದರು. ಇದಾದ ನಂತರ ಅವರು ಬಿಜು ಜನತಾ ದಳಕ್ಕೆ ಸೇರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



