ಅರವಿಂದ್ ಕೇಜ್ರಿವಾಲ್ ಕಸ್ಟಡಿ ವಿಸ್ತರಣೆ ಕೋರಿ ED ಅರ್ಜಿ; ಆದೇಶ ಕಾಯ್ದಿರಿಸಿದ ನ್ಯಾಯಾಲಯ!
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಹೆಚ್ಚಿನ ಕಸ್ಟಡಿ ವಿಚಾರಣೆಗೆ ಇಡಿ ಸಲ್ಲಿಸಿರುವ ಅರ್ಜಿ ಕುರಿತ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿದೆ.

ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಹೆಚ್ಚಿನ ಕಸ್ಟಡಿ ವಿಚಾರಣೆಗೆ ಇಡಿ ಸಲ್ಲಿಸಿರುವ ಅರ್ಜಿ ಕುರಿತ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿದೆ. ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರ ನ್ಯಾಯಾಲಯಕ್ಕೆ ಕೇಜ್ರಿವಾಲ್ ಅವರನ್ನು ಹಾಜರುಪಡಿಸಿ ಏಳು ದಿನಗಳ ಹೆಚ್ಚಿನ ಕಸ್ಟಡಿಗೆ ಇಡಿ ಮನವಿ ಮಾಡಿತು. ಪ್ರಕರಣದೊಂದಿಗೆ ಸಂಬಂಧ ಹೊಂದಿರುವ ಕೆಲವು ಜನರನ್ನು ವಿಚಾರಣೆಗೆ ಗುರಿಪಡಿಸಬೇಕಾಗಿದೆ ಎಂದು ಹೇಳಿತು.
ದೆಹಲಿಯ ರೂಸ್ ಅವೆನ್ಯೂ ಕೋರ್ಟ್ನಲ್ಲಿ ಗುರುವಾರ ಮಾತನಾಡಿದ ಅರವಿಂದ್ ಕೇಜ್ರಿವಾಲ್, ಜಾರಿ ನಿರ್ದೇಶನಾಲಯದ ಏಳು ದಿನಗಳ ಅವಧಿ ಅಂತ್ಯಗೊಂಡಿದೆ. ಆಡಳಿತಾರೂಢ ಬಿಜೆಪಿ ತಮ್ಮ ಪಕ್ಷವನ್ನು "ಪುಡಿಮಾಡಲು" ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.
ಯಾವುದೇ ನ್ಯಾಯಾಲಯ ತಮ್ಮನ್ನು ಅಪರಾಧಿ ಎಂದು ಸಾಬೀತುಪಡಿಸಿಲ್ಲ ಎಂದು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 15 ರಂದು ಇಡಿಯಿಂದ ಬಂಧಿಸಲ್ಪಟ್ಟ ಕೇಜ್ರಿವಾಲ್ ಒತ್ತಿ ಹೇಳಿದರು. ಅಲ್ಲದೆ ಇಡಿ ತನಿಖೆ ಎದುರಿಸಲು ಸಿದ್ಧ ಎಂದಿದ್ದಾರೆ. ನನ್ನನ್ನು ಬಂಧಿಸಲಾಯಿತು. ಆದರೆ ಯಾವ ನ್ಯಾಯಾಲಯವೂ ನನ್ನನ್ನು ಅಪರಾಧಿ ಎಂದು ಸಾಬೀತುಪಡಿಸಿಲ್ಲ. ಸಿಬಿಐ 31,000 ಪುಟಗಳು ಮತ್ತು ಇಡಿ 25,000 ಪುಟಗಳ ಚಾರ್ಚ್ ಶೀಟ್ ಸಲ್ಲಿಸಿದೆ. ನೀವು ಅವುಗಳನ್ನು ಒಟ್ಟಿಗೆ ಓದಿದರೂ ಸಹ ನನ್ನನ್ನು ಏಕೆ ಬಂಧಿಸಲಾಗಿದೆ? ಎಂಬ ಪ್ರಶ್ನೆ ಉಳಿದಿದೆ ಎಂದು ಕೇಜ್ರಿವಾಲ್ ನ್ಯಾಯಾಲಯವನ್ನು ಪ್ರಶ್ನಿಸಿದರು.
"ಇದೊಂದು ರಾಜಕೀಯ ಪಿತೂರಿ, ಜನರೇ ಉತ್ತರ ನೀಡುತ್ತಾರೆ" ಎಂದು ಕೇಜ್ರಿವಾಲ್ ಅವರು ನ್ಯಾಯಾಲಯದ ಕೊಠಡಿ ಪ್ರವೇಶಿಸುತ್ತಿದ್ದಂತೆ ಸುದ್ದಿಗಾರರಿಗೆ ಹೇಳಿದ್ದರು. ಕೇಜ್ರಿವಾಲ್ ಅವರನ್ನು ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರ ಮುಂದೆ ಹಾಜರುಪಡಿಸಲಾಯಿತು. ಎಎಪಿ ಸಚಿವರಾದ ಅತಿಶಿ, ಗೋಪಾಲ್ ರಾಯ್ ಮತ್ತು ಸೌರಭ್ ಭಾರದ್ವಾಜ್ ಮತ್ತು ಮುಖ್ಯಮಂತ್ರಿ ಪತ್ನಿ ಸುನೀತಾ ಕೇಜ್ರಿವಾಲ್ ನ್ಯಾಯಾಲಯದ ಒಳಗೇ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



