ಸಿಎಂ ಏಕನಾಥ್ ಶಿಂಧೆ ಸಮ್ಮುಖದಲ್ಲಿ ನಟ ಗೋವಿಂದ ಶಿವಸೇನೆ ಸೇರ್ಪಡೆ!
ಬಾಲಿವುಡ್ ಹಿರಿಯ ನಟ ಗೋವಿಂದ ಶಿವಸೇನೆ ಸೇರಿದ್ದಾರೆ. ವಾಣಿಜ್ಯ ರಾಜಧಾನಿ ಮುಂಬೈಯಲ್ಲಿ ಗುರುವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಮ್ಮುಖದಲ್ಲಿ ಶಿವಸೇನೆ ಸೇರಿದ ಗೋವಿಂದ, ವಾಯವ್ಯ ಮುಂಬೈ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.

ಮುಂಬೈ: ಬಾಲಿವುಡ್ ಹಿರಿಯ ನಟ ಗೋವಿಂದ ಶಿವಸೇನೆ ಸೇರಿದ್ದಾರೆ. ವಾಣಿಜ್ಯ ರಾಜಧಾನಿ ಮುಂಬೈಯಲ್ಲಿ ಗುರುವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಮ್ಮುಖದಲ್ಲಿ ಶಿವಸೇನೆ ಸೇರಿದ ಗೋವಿಂದ, ವಾಯವ್ಯ ಮುಂಬೈ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.
ಈ ತಿಂಗಳ ಆರಂಭದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಶಿಂಧೆ ಅವರೊಂದಿಗೆ ಗೋವಿಂದ ಸಭೆ ನಡೆಸಿದ್ದರು. ಕಳೆದ ವಾರ ನಡೆದ ಈ ಸಭೆಯ ಸಂದರ್ಭದಲ್ಲಿ ಅವರ ರಾಜಕೀಯಕ್ಕೆ ಮರಳುವ ವದಂತಿಯನ್ನು ಮತ್ತಷ್ಟು ಹೆಚ್ಚಿಸಿತ್ತು.
ಗೋವಿಂದ ರಾಜಕೀಯ ಕ್ಷೇತ್ರಕ್ಕೆ ಹೊಸಬರಲ್ಲ. 2004 ರಲ್ಲಿ ಅವರು ಕಾಂಗ್ರೆಸ್ ಟಿಕೆಟ್‌ನಲ್ಲಿ ಮುಂಬೈ ಉತ್ತರ ಲೋಕಸಭಾ ಕ್ಷೇತ್ರಕ್ಕೆ ಯಶಸ್ವಿಯಾಗಿ ಸ್ಪರ್ಧಿಸುವ ಮೂಲಕ ಹಿರಿಯ ಬಿಜೆಪಿ ನಾಯಕ ರಾಮ್ ನಾಯಕ್ ಅವರನ್ನು ಸೋಲಿಸಿದ್ದರು. ಆದರೆ, ಬಳಿಕ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


