ಬಂಧನ ನಂತರ ಸಿಎಂ ಸ್ಥಾನದಿಂದ ಕೇಜ್ರಿವಾಲ್ ಕೆಳಗಿಳಿಸಲು ಪಿಐಎಲ್, ವಜಾಗೊಳಿಸಿದ ಹೈಕೋರ್ಟ್
ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನದ ನಂತರ ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.

ನವದೆಹಲಿ: ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನದ ನಂತರ ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ. ಇದು ನ್ಯಾಯಾಂಗ ಹಸ್ತಕ್ಷೇಪದ ವ್ಯಾಪ್ತಿಯಿಂದ ಹೊರಗಿದೆ ಎಂದು ಹೇಳುವ ಮೂಲಕ ಈ ವಿಚಾರದ ಅರ್ಹತೆಗಳ ಬಗ್ಗೆ ಪ್ರತಿಕ್ರಿಯಿಸಲು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ಪೀಠ ನಿರಾಕರಿಸಿದೆ.
"ಕಾನೂನಿಗೆ ಅನುಸಾರವಾಗಿ ಪರಿಶೀಲಿಸುವುದು ಸರ್ಕಾರದ ಇತರ ವಿಭಾಗಳಿಗೆ ಸೇರಿದ್ದು ಎಂದು ನ್ಯಾಯಮೂರ್ತಿ ಮನ್ಮೀತ್ ಪಿಎಸ್ ಅರೋರಾ ಅವರನ್ನೊಳಗೊಂಡ ಪೀಠ ಹೇಳಿದೆ. ಮುಖ್ಯಮಂತ್ರಿಯಾಗಿ ಕೇಜ್ರಿವಾಲ್ ಮುಂದುವರಿಕೆಗೆ ಕಾನೂನು ತಡೆಯನ್ನು ತೋರಿಸಲು ಅರ್ಜಿದಾರರಾದ ಸುರ್ಜಿತ್ ಸಿಂಗ್ ಯಾದವ್ ಪರ ವಕೀಲರಿಗೆ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯ ಹೇಳಿದೆ.
"ಪ್ರಾಯೋಗಿಕ ತೊಂದರೆಗಳಿರಬಹುದು ಆದರೆ ಅದು ಬೇರೆಯದು. ಕಾನೂನು ತಡೆ ಎಲ್ಲಿದೆ? ಎಂದು ನ್ಯಾಯಾಲಯ ಕೇಳಿತು. ಮಾರ್ಚ್ 21 ರಂದು ಬಂಧಿಸಲ್ಪಟ್ಟ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ನಂತರ ದೆಹಲಿ ನ್ಯಾಯಾಲಯವು ಮಾರ್ಚ್ 28 ರವರೆಗೆ ಜಾರಿ ನಿರ್ದೇಶನಾಲಯದ (ಇಡಿ) ಕಸ್ಟಡಿಗೆ ಒಪ್ಪಿಸಲಾಯಿತು. ನಿರ್ದಿಷ್ಟ ವ್ಯಕ್ತಿಗಳಿಗೆ ಅನುಕೂಲವಾಗುವ ಅಬಕಾರಿ ನೀತಿ ರಚನೆಗೆ ಸಂಬಂಧಿಸಿದ ಪಿತೂರಿನಲ್ಲಿ ಅವರು ನೇರವಾಗಿ ಭಾಗಿಯಾಗಿರುವ ಆರೋಪವನ್ನು ಎದುರಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



