ಜಮ್ಮು ಮತ್ತು ಕಾಶ್ಮೀರ: 300 ಅಡಿ ಆಳದ ಕಮರಿಗೆ ಬಿದ್ದ ಎಸ್‌ಯುವಿ; 10 ಮಂದಿ ದಾರುಣ ಸಾವು
ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕಿಡ್ ಆಗಿ ಎಸ್‌ಯುವಿ ಕಮರಿಗೆ ಬಿದ್ದ ಪರಿಣಾಮ 10 ಮಂದಿ ಸಾವಿಗೀಡಾಗಿರುವ ಘಟನೆ ರಾಂಬನ್ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬನಿಹಾಲ್/ಜಮ್ಮು: ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕಿಡ್ ಆಗಿ ಎಸ್‌ಯುವಿ ಕಮರಿಗೆ ಬಿದ್ದ ಪರಿಣಾಮ 10 ಮಂದಿ ಸಾವಿಗೀಡಾಗಿರುವ ಘಟನೆ ರಾಂಬನ್ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಾಹನವು ಶ್ರೀನಗರದಿಂದ ಜಮ್ಮುವಿಗೆ ತೆರಳುತ್ತಿತ್ತು ಮತ್ತು ಅದು ಜಿಲ್ಲೆಯ ಬ್ಯಾಟರಿ ಚೆಶ್ಮಾ ಪ್ರದೇಶದಲ್ಲಿ 1.15 ರ ಸುಮಾರಿಗೆ 300 ಅಡಿ ಆಳದ ಕಮರಿಗೆ ಬಿದ್ದಿದೆ. ಘಟನೆಯಲ್ಲಿ ಹತ್ತು ಮಂದಿ ಸಾವಿಗೀಡಾಗಿದ್ದಾರೆ ಎಂದು ಅವರು ಹೇಳಿದರು.
ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಸಿಬ್ಬಂದಿ ಸ್ಥಳದಲ್ಲಿದ್ದಾರೆ.
ಭಾರಿ ಮಳೆಯ ನಡುವೆಯೇ 10 ಪ್ರಯಾಣಿಕರ ಮೃತದೇಹಗಳನ್ನು ಕಮರಿಯಿಂದ ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರಿನ ಚಾಲಕ ಜಮ್ಮುವಿನ ಅಂಬ್ ಘೋಥಾದ ಬಲ್ವಾನ್ ಸಿಂಗ್ (47) ಮತ್ತು ಬಿಹಾರದ ಪಶ್ಚಿಮ ಚಂಪಾರಣ್‌ನ ವಿಪಿನ್ ಮುಖಿಯಾ ಭೈರಗಾಂಗ್ ಮೃತಪಟ್ಟವರಲ್ಲಿ ಸೇರಿದ್ದಾರೆ ಎಂದು ಅವರು ಹೇಳಿದರು.
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



