ಕಾಂಗ್ರೆಸ್ ಆಯ್ತು, 11 ಕೋಟಿ ರೂ. ಬಾಕಿ ಪಾವತಿಸುವಂತೆ ಈಗ ಸಿಪಿಐಗೆ ಐಟಿ ಇಲಾಖೆ ನೋಟಿಸ್!
ಕಳೆದ ಕೆಲವು ವರ್ಷಗಳಿಂದ ತೆರಿಗೆ ರಿಟರ್ನ್ಸ್ ಸಲ್ಲಿಸುವಾಗ ಹಳೆಯ ಪ್ಯಾನ್ ಕಾರ್ಡ್ ಅನ್ನು ಬಳಸಿದ್ದಕ್ಕಾಗಿ 11 ಕೋಟಿ ರೂ.ಗಳ ಬಾಕಿ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆಯು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಗೆ ನೋಟಿಸ್ ನೀಡಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.

ನವದೆಹಲಿ: ಕಳೆದ ಕೆಲವು ವರ್ಷಗಳಿಂದ ತೆರಿಗೆ ರಿಟರ್ನ್ಸ್ ಸಲ್ಲಿಸುವಾಗ ಹಳೆಯ ಪ್ಯಾನ್ ಕಾರ್ಡ್ ಅನ್ನು ಬಳಸಿದ್ದಕ್ಕಾಗಿ 11 ಕೋಟಿ ರೂ.ಗಳ ಬಾಕಿ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆಯು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಗೆ ನೋಟಿಸ್ ನೀಡಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.
ತೆರಿಗೆ ಅಧಿಕಾರಿಗಳು ನೋಟಿಸ್ ಜಾರಿ ಮಾಡಿರುವುದನ್ನು ಪ್ರಶ್ನಿಸಲು ಎಡಪಕ್ಷವು ತನ್ನ ವಕೀಲರನ್ನು ಸಂಪರ್ಕಿಸುತ್ತಿದೆ ಎಂದು ತಿಳಿದುಬಂದಿದೆ.
ತೆರಿಗೆ ರಿಟರ್ನ್ಸ್ ಸಲ್ಲಿಸುವಾಗ ಹಳೆಯ ಪ್ಯಾನ್ ಕಾರ್ಡ್ ಬಳಸಿದ್ದಕ್ಕಾಗಿ ಪಾವತಿಸಬೇಕಾದ ತೆರಿಗೆ ಬಾಕಿ, ಬಡ್ಡಿ ಮತ್ತು ದಂಡಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಸಿಪಿಐಗೆ ಈ ನೋಟಿಸ್ ಜಾರಿ ಮಾಡಿದೆ ಮೂಲಗಳು ತಿಳಿಸಿವೆ.
ಆದಾಯ ತೆರಿಗೆ ಇಲಾಖೆಯು ನೋಟಿಸ್ ಜಾರಿ ಮಾಡಿರುವುದಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ನೆರವು ಪಡೆಯಲು ನೋಡುತ್ತಿದ್ದೇವೆ ಮತ್ತು ಅದಕ್ಕಾಗಿ ನಮ್ಮ ವಕೀಲರನ್ನು ಸಂಪರ್ಕಿಸುತ್ತಿದ್ದೇವೆ ಎಂದು ಹಿರಿಯ ಸಿಪಿಐ ನಾಯಕರೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಹಿಂದಿನ ವರ್ಷಗಳ ತೆರಿಗೆ ರಿಟರ್ನ್ಸ್‌ನಲ್ಲಿನ ವ್ಯತ್ಯಾಸಗಳಿಗಾಗಿ ಆದಾಯ ತೆರಿಗೆ ಇಲಾಖೆಯು 1,700 ಕೋಟಿ ರೂಪಾಯಿ ಪಾವತಿಸುವಂತೆ ಹೊಸ ನೋಟಿಸ್ ಅನ್ನು ನೀಡಿದೆ ಎಂದು ಕಾಂಗ್ರೆಸ್ ತಿಳಿಸಿದೆ.
ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಸಾಕೇತ್ ಗೋಖಲೆ ಅವರು ಕಳೆದ 72 ಗಂಟೆಗಳಲ್ಲಿ 11 ಐಟಿ ನೋಟಿಸ್‌ಗಳನ್ನು ಸ್ವೀಕರಿಸಿದ್ದಾರೆ ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಪ್ರತಿಪಕ್ಷಗಳನ್ನು ಕುಗ್ಗಿಸಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




