ಕೇಂದ್ರದಲ್ಲಿ ಸರ್ಕಾರ ಬದಲಾದಾಗ ''ಪ್ರಜಾಪ್ರಭುತ್ವದ ಕಗ್ಗೊಲೆ'' ಮಾಡಿದವರ ವಿರುದ್ಧ ಕ್ರಮ: ರಾಹುಲ್ ಗಾಂಧಿ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದೇಶದಲ್ಲಿ ''ಪ್ರಜಾಪ್ರಭುತ್ವದ ಕಗ್ಗೊಲೆ'' ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದೇಶದಲ್ಲಿ ''ಪ್ರಜಾಪ್ರಭುತ್ವದ ಕಗ್ಗೊಲೆ'' ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ತೆರಿಗೆ ಭಯೋತ್ಪಾದನೆಯಲ್ಲಿ ತೊಡಗಿದೆ. ಕೇಂದ್ರದಲ್ಲಿ ಸರ್ಕಾರ ಬದಲಾದಾಗ, 'ಪ್ರಜಾಪ್ರಭುತ್ವವನ್ನು ಕಗ್ಗೊಲೆ' ಮಾಡಿದವರ ವಿರುದ್ಧ ಖಂಡಿತವಾಗಿಯೂ ಕ್ರಮ ತೆಗೆದುಕೊಳ್ಳಲಾಗುವುದು. ಮಾದರಿಯ ಕ್ರಮವನ್ನು ತೆಗೆದುಕೊಳ್ಳಲಾಗುವುದು, ಮತ್ತೆ ಯಾರೂ ಇದನ್ನು ಮಾಡಲು ಧೈರ್ಯ ಮಾಡಬಾರದು. ಇದು ನನ್ನ ಗ್ಯಾರಂಟಿ ಎಂದು ರಾಹುಲ್ ಗಾಂಧಿ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.
ತಮ್ಮದೇ ಹಿಂದಿನ ವಿಡಿಯೋವನ್ನು ಟ್ಯಾಗ್ ಮಾಡಿರುವ ರಾಹುಲ್ ಗಾಂಧಿ, ಪೋಸ್ಟ್‌ನೊಂದಿಗೆ "#BJPTaxTerrorism" ಎಂಬ ಹ್ಯಾಶ್‌ಟ್ಯಾಗ್ ಅನ್ನು ಬಳಸಿದ್ದಾರೆ.
ಖರ್ಗೆ ವಾಗ್ದಾಳಿ
ಏತನ್ಮಧ್ಯೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಲು ಮತ್ತು ಸಂವಿಧಾನವನ್ನು ಅವಮಾನಿಸಲು ಆದಾಯ ತೆರಿಗೆ ಇಲಾಖೆ, ಇಡಿ ಮತ್ತು ಸಿಬಿಐಯಂತಹ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು. ಪ್ರಧಾನ ಪ್ರತಿಪಕ್ಷ ಕಾಂಗ್ರೆಸ್ ಅನ್ನು ಕೆರಳಿಸಲು ಐಟಿ ಇಲಾಖೆಯನ್ನು ಏಕೆ ಅಸ್ತ್ರವಾಗಿ ಬಳಸಲಾಗುತ್ತಿದೆ? ಎಂದು ಖರ್ಗೆ ಪ್ರಶ್ನಿಸಿದರು.
ಇಂತಹ ಕ್ರಮಗಳು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪರ್ಧಿಸುವುದನ್ನು ತಡೆಯುವುದಿಲ್ಲ. ತಮ್ಮ ಪಕ್ಷವು ಭಾರತೀಯ ಜನತಾ ಪಕ್ಷದ (ಬಿಜೆಪಿ) "ಸರ್ವಾಧಿಕಾರ" ದಿಂದ ದೇಶದ ಸಂಸ್ಥೆಗಳನ್ನು ಮುಕ್ತಗೊಳಿಸುತ್ತದೆ ಎಂದು ಪ್ರತಿಜ್ಞೆ ಮಾಡಿದರು.
ಅಂತೆಯೇ ಬಿಜೆಪಿಯ 42 ಕೋಟಿ ಲೆಕ್ಕವಿಲ್ಲದ ಠೇವಣಿಗಳಿಗೆ 4,600 ಕೋಟಿ ರೂ.ಗಳ ದಂಡವನ್ನು ಹೇರಬೇಕಿತ್ತು. ಆದರೆ ಅದನ್ನು "ನಿರ್ಲಕ್ಷಿಸಲಾಗಿದೆ". ಅದೇ ರೀತಿ ಕಾಂಗ್ರೆಸ್ ನ ಶಾಸಕರು ಮತ್ತು ಸಂಸದರು ನೀಡಿದ 14 ಲಕ್ಷ ರೂ. ನಗದು ಠೇವಣಿಗಳಿಗೆ 135 ಕೋಟಿ ರೂ. ದಂಡ ಹೇರುವಂತೆ ಒತ್ತಾಯಿಸಲಾಗುತ್ತಿದೆ.
ಆದಾಯ ತೆರಿಗೆ ಇಲಾಖೆಯು ಪ್ರತಿಪಕ್ಷಗಳ ವಿರುದ್ಧ ಮಾತ್ರ ಈ ರೀತಿ ಅನ್ಯಾಯವಾಗಿ ವರ್ತಿಸುವಂತೆ ಒತ್ತಡ ಹೇರುತ್ತಿರುವವರು ಯಾರು? ಪ್ರಧಾನ ವಿರೋಧ ಪಕ್ಷವಾದ ಕಾಂಗ್ರೆಸ್‌ಗೆ ಕಿರುಕುಳ ನೀಡಲು ಐಟಿ ಇಲಾಖೆಯನ್ನು ಏಕೆ ಅಸ್ತ್ರವಾಗಿ ಬಳಸಲಾಗುತ್ತಿದೆ? ಅವರು ಐಟಿ, ಇಡಿಯಂತಹ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಸಿಬಿಐ ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಲು ಮತ್ತು ಸಂವಿಧಾನವನ್ನು ಕೀಳಾಗಿಸುತ್ತಿದೆ ಎಂದು ಅವರು ಟ್ವಿಟರ್ ನಲ್ಲಿ ಪೋಸ್ಟ್ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




