ದೇಶ

ಲೋಕಸಭೆ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಆಘಾತ: ದೆಹಲಿಯ ಇಬ್ಬರು ಮಾಜಿ ಶಾಸಕರ ರಾಜೀನಾಮೆ

ದೆಹಲಿ ಕಾಂಗ್ರೆಸ್‌ನ ಮಾಜಿ ಶಾಸಕರಾದ ನೀರಜ್ ಬಸೋಯಾ ಮತ್ತು ನಸೀಬ್‌ ಸಿಂಗ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಲೋಕಸಭೆ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಆಘಾತ: ದೆಹಲಿಯ ಇಬ್ಬರು ಮಾಜಿ ಶಾಸಕರ ರಾಜೀನಾಮೆ
ಕಾಂಗ್ರೆಸ್ ಲೋಗೋ
Published On :

ನವದೆಹಲಿ: ದೆಹಲಿ ಕಾಂಗ್ರೆಸ್‌ನ ಮಾಜಿ ಶಾಸಕರಾದ ನೀರಜ್ ಬಸೋಯಾ ಮತ್ತು ನಸೀಬ್‌ ಸಿಂಗ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದು ರಾಜೀನಾಮೆ ಸಲ್ಲಿಸಿದ್ದಾರೆ. ದೆಹಲಿಯಲ್ಲಿ ಎಎಪಿ ಕಳೆದ 7 ವರ್ಷಗಳಿಂದ ಅಧಿಕಾರದಲ್ಲಿದೆ. ಈ ಅವಧಿಯಲ್ಲಿ ಎಎಪಿ ಹಲವಾರು ಹಗರಣಗಳಲ್ಲಿ ಭಾಗಿಯಾಗಿದ್ದು ನಾವು ಮತ್ತೆ ಅವರೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಅವಮಾನಕರಿಯಾಗಿದೆ.

ಈಗಾಗಲೇ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಎಎಪಿ ಹಿರಿಯ ನಾಯಕರಾದ ಸತ್ಯೇಂದ್ರ ಜೈನ್ ಮತ್ತು ಮನೀಶ್ ಸಿಸೋಡಿಯಾ ಈಗಾಗಲೇ ಜೈಲಿನಲ್ಲಿದ್ದಾರೆ. ಅಲ್ಲದೇ ಪಕ್ಷದ ಇತರೆ ಮುಖಂಡರುಗಳ ವಿರುದ್ಧ ಮದ್ಯ ಹಗರಣ, ಜಲ ಮಂಡಳಿ ಹಗರಣ ಸೇರಿದಂತೆ ವಿವಿಧ ಗಂಭೀರ ಭ್ರಷ್ಟಾಚಾರದ ಆರೋಪಗಳಿವೆ. ಇಂತಹವರ ಜೊತೆ ನಮ್ಮ ಮೈತ್ರಿ ಸರಿಯಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಬೆಳವಣಿಗೆಗಳಿಂದ ಬೆಸತ್ತು ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಅವರು ಪತ್ರದಲ್ಲಿ ತಿಳಿಸಿದ್ದಾರೆ. ಇತ್ತ ಮಧ್ಯಪ್ರದೇಶದಲ್ಲಿ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ರಾಮ್ನಿವಾಸ್ ರಾವತ್ ಮಂಗಳವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಕಾಂಗ್ರೆಸ್‍ಗೆ ದೊಡ್ಡ ಆಘಾತವಾಗಿದೆ. ರಾವತ್ ಅವರು ದಿಗ್ವಿಜಯ್ ಸಿಂಗ್ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ ಈ ಹಿಂದೆ ಸಂಸದ ಕಾಂಗ್ರೆಸ್‍ನ ಕಾರ್ಯಕಾರಿ ಅಧ್ಯಕ್ಷರಾಗಿದ್ದರು. ಸಂಸದ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡುತ್ತಿರುವಾಗಲೇ ರಾವತ್ ಪಕ್ಷಾಂತರ ನಡೆದಿರುವುದು ಅಚ್ಚರಿ ಮೂಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.