ದೇಶ

ನಾನು ಮೋದಿಯವರ ಬಹು ದೊಡ್ಡ ಅಭಿಮಾನಿ: ಬಿಜೆಪಿ ಸೇರಿದ ನಟಿ ರೂಪಾಲಿ ಗಂಗೂಲಿ

ಎಲ್ಲರನ್ನೂ ಬಿಜೆಪಿಯತ್ತ ಆಕರ್ಷಿಸುವ ಏಕೈಕ ವ್ಯಕ್ತಿತ್ವ ಪ್ರಧಾನಿ ಮೋದಿ. ಅವರ ಕಾರ್ಯ ವೈಖರಿ ಮತ್ತು ನಮ್ಮ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ರೀತಿ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದೆ

ನಾನು ಮೋದಿಯವರ ಬಹು ದೊಡ್ಡ ಅಭಿಮಾನಿ: ಬಿಜೆಪಿ ಸೇರಿದ ನಟಿ ರೂಪಾಲಿ ಗಂಗೂಲಿ
ಬಿಜೆಪಿ ಸೇರಿದ ನಟಿ ರೂಪಾಲಿ ಗಂಗೂಲಿ
Published On :

ನವದೆಹಲಿ: ಖ್ಯಾತ ಧಾರಾವಾಹಿ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದ ಪ್ರಗತಿಗಾಗಿ ಕೆಲಸ ಮಾಡಲು ಪಕ್ಷ ಸೇರಿದ್ದೇನೆ ಎಂದು ತಿಳಿಸಿದ್ದಾರೆ.

ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತ್ತು ರಾಷ್ಟ್ರೀಯ ಮಾಧ್ಯಮ ವಿಭಾಗದ ಉಸ್ತುವಾರಿ ಅನಿಲ್ ಬಲುನಿ ಸೇರಿದಂತೆ ಹಿರಿಯ ಬಿಜೆಪಿ ನಾಯಕರ ಸಮ್ಮುಖದಲ್ಲಿ ರೂಪಾಲಿ ಬಿಜೆಪಿ ಸೇರಿದರು. ನಂತರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಬಳಿಕ ಮಾತನಾಡಿದ ರೂಪಾಲಿ, ಎಲ್ಲರನ್ನೂ ಬಿಜೆಪಿಯತ್ತ ಆಕರ್ಷಿಸುವ ಏಕೈಕ ವ್ಯಕ್ತಿತ್ವ ಪ್ರಧಾನಿ ಮೋದಿ. ಅವರ ಕಾರ್ಯ ವೈಖರಿ ಮತ್ತು ನಮ್ಮ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ರೀತಿ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದೆ. ಅಭಿವೃದ್ಧಿಯ ಈ ‘ಮಹಾಯಜ್ಞ’ವನ್ನು ನೋಡಿದಾಗ ನಾನು ಸಹ ಇದರಲ್ಲಿ ಪಾಲ್ಗೊಳ್ಳಬೇಕು ಎಂದು ನನಗೆ ಅನಿಸಿತು. ಹಾಗಾಗಿ ಬಿಜೆಪಿಗೆ ಸೇರಿದ್ದೇನೆ’ ಎಂದು ಹೇಳಿದ್ದಾರೆ.ನಾನು ಸಹ ‘ಮೋದಿ ಸೇನೆ’ಗೆ ಸೇರ್ಪಡೆಯಾಗುವ ಮೂಲಕ ದೇಶಕ್ಕೆ ನನ್ನದೇ ಆದ ಕೊಡುಗೆ ನೀಡಲು ಬಯಸುತ್ತೇನೆ ಎಂದಿದ್ದಾರೆ.

ಪ್ರಧಾನಿ ಮೋದಿ ನನಗೆ ಸ್ಫೂರ್ತಿ. ನಾನು ಅವರ ದೊಡ್ಡ ಅಭಿಮಾನಿ. ಬಿಜೆಪಿ ಅತ್ಯುತ್ತಮ ಕೆಲಸ ಮಾಡುತ್ತಿದೆ. ಆದ್ದರಿಂದ ಬಿಜೆಪಿ ಸೇರಲು ನಿರ್ಧರಿಸಿದ್ದೆ. ನನ್ನನ್ನು ಪಕ್ಷಕ್ಕೆ ಸ್ವಾಗತಿಸಿದ್ದಕ್ಕೆ ನಾನು ಆಭಾರಿ. ನಾಗರಿಕರಾದ ನಾವೆಲ್ಲರೂ ಈ ಚುನಾವಣೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

'ಸಾರಾಭಾಯ್ ವರ್ಸಸ್ ಸಾರಾಭಾಯ್' ಮತ್ತು 'ಅನುಪಮಾ' ಮುಂತಾದ ಟಿವಿ ಧಾರಾವಾಹಿಗಳ ಮೂಲಕ ಹೆಸರುವಾಸಿಯಾಗಿರುವ ರೂಪಾಲಿ ಗಂಗೂಲಿ, ಕಳೆದ ಮಾರ್ಚ್‌ನಲ್ಲಿ ಮೋದಿ ಅವರನ್ನು ಭೇಟಿ ಮಾಡಿದ್ದರು. ಈ ವಿಚಾರವನ್ನು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದರು. ಇದೀಗ ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.