'ಟಿಎಂಸಿಗಿಂತ ಬಿಜೆಪಿಗೆ ಮತ ಹಾಕುವುದು ಉತ್ತಮ': ಕಾಂಗ್ರೆಸ್ ಗೆ ಮುಜುಗರ ತಂದ ಅಧೀರ್ ರಂಜನ್ ಹೇಳಿಕೆ!
ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಮತ್ತು ಬಹರಂಪುರದ ಕಾಂಗ್ರೆಸ್ ಅಭ್ಯರ್ಥಿ ಅಧೀರ್ ಚೌಧರಿ ಅವರು ಟಿಎಂಸಿಗಿಂತ ಬಿಜೆಪಿಗೆ ಮತ ಹಾಕುವುದು ಉತ್ತಮ ಎಂದು ಹೇಳಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು ಅಧೀರ್ ಅವರ ಈ ಹೇಳಿಕೆ ಇದೀಗ ಕಾಂಗ್ರೆಸ್ ಗೆ ಮುಜುಗರ ತಂದಿಟ್ಟಿದೆ.

ನವದೆಹಲಿ: ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಮತ್ತು ಬಹರಂಪುರದ ಕಾಂಗ್ರೆಸ್ ಅಭ್ಯರ್ಥಿ ಅಧೀರ್ ಚೌಧರಿ ಅವರು ಟಿಎಂಸಿಗಿಂತ ಬಿಜೆಪಿಗೆ ಮತ ಹಾಕುವುದು ಉತ್ತಮ ಎಂದು ಹೇಳಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು ಅಧೀರ್ ಅವರ ಈ ಹೇಳಿಕೆ ಇದೀಗ ಕಾಂಗ್ರೆಸ್ ಗೆ ಮುಜುಗರ ತಂದಿಟ್ಟಿದೆ.
INDIA ಮೈತ್ರಿಕೂಟದ ಪ್ರಮುಖ ಪಕ್ಷವಾಗಿರುವ ಟಿಎಂಸಿಯ ವಿರುದ್ಧ ಮಾತನಾಡಿರುವ ಅಧೀರ್ ರಂಜನ್ ಚೌಧರಿ ವಿರುದ್ಧ ಇದೀಗ ಟಿಎಂಸಿ ತಿರುಗಿ ಬಿದ್ದಿದೆ. ಅಲ್ಲದೆ ಕಾಂಗ್ರೆಸ್ ಅನ್ನು ಬಿಜೆಪಿಯ 'ಬಿ-ಟೀಮ್' ಎಂದು ಕರೆದಿದೆ.
ಈ ವಿಡಿಯೋಗೆ ಪ್ರತಿಕ್ರಿಯಿಸಿರುವ ಟಿಎಂಸಿ, ಕಾಂಗ್ರೆಸ್ ಜೊತೆಗಿನ ಸೀಟು ಹಂಚಿಕೆಯ ಮಾತುಕತೆ ವಿಫಲವಾಗಿರುವುದಕ್ಕೆ ಅಧೀರ್ ರಂಜನ್ ಚೌಧರಿ ಅವರನ್ನು ದೂಷಿಸಿದ್ದು, ಅವರನ್ನು ಬಂಗಾಳ ವಿರೋಧಿ ಎಂದು ಬಣ್ಣಿಸಿದೆ. ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಟಿಎಂಸಿ, ಬಂಗಾಳದಲ್ಲಿ ಬಿಜೆಪಿಯ ಕಣ್ಣು ಮತ್ತು ಕಿವಿಯಾಗಿ ಕೆಲಸ ಮಾಡಿದ್ದ ಅಧೀರ್ ರಂಜನ್ ಚೌಧರಿ ಅವರನ್ನು ಈಗ ಬಂಗಾಳದಲ್ಲಿ ಬಿಜೆಪಿಯ ಧ್ವನಿಯಾಗಿ ನೋಡಬಹುದು ಮತ್ತು ಕೇಳಬಹುದು ಎಂದು ಟೀಕಿಸಿದೆ.
ಬಿಜೆಪಿಗೆ ಮತ ಹಾಕುವಂತೆ ಬಿ-ಟೀಮ್ ಸದಸ್ಯರು ಬಹಿರಂಗವಾಗಿ ಹೇಗೆ ಕೇಳುತ್ತಿದ್ದಾರೆ ಎಂಬುದನ್ನು ಕೇಳಿ ಎಂದು ಟಿಎಂಸಿ ಪೋಸ್ಟ್‌ನಲ್ಲಿ ಬರೆದುಕೊಂಡಿದೆ. ಬಂಗಾಳಕ್ಕೆ ಸರಿಯಾದ ಹಕ್ಕುಗಳನ್ನು ನೀಡಲು ನಿರಾಕರಿಸಿದ ಮತ್ತು ನಮ್ಮ ಜನರ ಹಕ್ಕುಗಳನ್ನು ಕಸಿದುಕೊಂಡ ಪಕ್ಷ. ಬಾಂಗ್ಲಾ ವಿರೋಧಿಗಳು ಮಾತ್ರ ಬಿಜೆಪಿ ಪರ ಪ್ರಚಾರ ಮಾಡಬಹುದು. ಮೇ 13ರಂದು ಬಹರಂಪುರದ ಜನತೆ ಈ ವಂಚನೆಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಟ್ವೀಟಿಸಿದೆ.
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಕಾಂಗ್ರೆಸ್-ಎಡ ಮೈತ್ರಿಕೂಟ ಮತ್ತು ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಕಂಡುಬರುತ್ತಿದೆ. 42 ಲೋಕಸಭಾ ಸ್ಥಾನಗಳಲ್ಲಿ ಟಿಎಂಸಿ 22 ಸಂಸದರನ್ನು ಹೊಂದಿದೆ, ಬಿಜೆಪಿ 17 ಮತ್ತು ಕಾಂಗ್ರೆಸ್ ಎರಡು ಸಂಸದರನ್ನು ಹೊಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



