CBSE 10, 12 ನೇ ತರಗತಿ ಪರೀಕ್ಷೆ: ಮೇ 20ರ ನಂತರ ಫಲಿತಾಂಶ ಪ್ರಕಟ ಸಾಧ್ಯತೆ
ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(CBSE) 10 ಮತ್ತು 12 ನೇ ತರಗತಿಯ ಫಲಿತಾಂಶಗಳನ್ನು ಮೇ 20 ರ ನಂತರ ಪ್ರಕಟಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(CBSE) 10 ಮತ್ತು 12 ನೇ ತರಗತಿಯ ಫಲಿತಾಂಶಗಳನ್ನು ಮೇ 20 ರ ನಂತರ ಪ್ರಕಟಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಪರೀಕ್ಷೆಯ ಫಲಿತಾಂಶ ಪ್ರಕಟ ಕುರಿತ ಊಹಾಪೋಹಗಳ ನಡುವೆಯೇ ಈ ಸ್ಪಷ್ಟನೆ ಬಂದಿದೆ. ಮೇ 3ರಂದೇ ಫಲಿತಾಂಶ ಪ್ರಕಟವಾಗಲಿದೆ ಎಂಬ ವದಂತಿ ಹಬ್ಬಿತ್ತು.
ಆದರೆ, ಈ ವದಂತಿ ಸುಳ್ಳು ಎಂದು ಅಧಿಕಾರಿಗಳು ಸ್ಪಷ್ಪಪಡಿಸಿದ್ದು, "ಸಿಬಿಎಸ್‌ಇ 10 ಮತ್ತು 12 ನೇ ತರಗತಿ ಫಲಿತಾಂಶಗಳನ್ನು ಮೇ 20 ರ ನಂತರ ಪ್ರಕಟಿಸುವ ಸಾಧ್ಯತೆಯಿದೆ" ಎಂದು ಮಂಡಳಿಯು ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ. ಫೆಬ್ರವರಿ-ಏಪ್ರಿಲ್ ತಿಂಗಳ ನಡುವೆ 10 ಮತ್ತು 12ನೇ ತರಗತಿಯ ಪರೀಕ್ಷೆಯನ್ನು ನಡೆಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



