ರೋಹಿತ್ ವೇಮುಲ ದಲಿತನೇ ಅಲ್ಲ; ಆತ್ಮಹತ್ಯೆಗೆ ಇದೇ ಕಾರಣ: ಪೊಲೀಸರ ಅಂತಿಮ ವರದಿ
ಹೈದ್ರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ರೋಹಿತ್ ವೇಮುಲ ಸಾವಿನ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಹೈಕೋರ್ಟ್ ಗೆ ಅಂತಿಮ ವರದಿ ಸಲ್ಲಿಸಿದ್ದಾರೆ. ಇದರಲ್ಲಿ ಆತ ದಲಿತನೇ ಅಲ್ಲ. ತನ್ನ ನಿಜವಾದ ಜಾತಿಯ ಗುರುತು ಪತ್ತೆಯಾಗುತ್ತದೆ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಪ್ರತಿಪಾದಿಸಿದ್ದಾರೆ.

ಹೈದ್ರಾಬಾದ್: ಹೈದ್ರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ರೋಹಿತ್ ವೇಮುಲ ಸಾವಿನ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಹೈಕೋರ್ಟ್ ಗೆ ಅಂತಿಮ ವರದಿ ಸಲ್ಲಿಸಿದ್ದಾರೆ. ಇದರಲ್ಲಿ ಆತ ದಲಿತನೇ ಅಲ್ಲ. ತನ್ನ ನಿಜವಾದ ಜಾತಿಯ ಗುರುತು ಪತ್ತೆಯಾಗುತ್ತದೆ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಪ್ರತಿಪಾದಿಸಿದ್ದಾರೆ.
ಪ್ರಕರಣದ ತನಿಖೆ ನಡೆಸಿದ ಸೈಬರಾಬಾದ್ ಪೊಲೀಸರು, ರೋಹಿತ್ ವೇಮುಲ ಪರಿಶಿಷ್ಟ ಜಾತಿಗೆ ಸೇರಿದವರಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. 2016ರಲ್ಲಿ ವೇಮುಲ ಆತ್ಮಹತ್ಯೆ ಮಾಡಿಕೊಂಡಿದ್ದರು.
ರೋಹಿತ್ ವೇಮುಲಗೆ ತಾನು ಪರಿಶಿಷ್ಟ ಜಾತಿಗೆ ಸೇರಿದವನಲ್ಲ ಎಂಬುದು ಗೊತಿತ್ತು. ತನ್ನ ತಾಯಿ ತನಗೆ ಪರಿಶಿಷ್ಟ ಜಾತಿ ಸರ್ಟಿಫಿಕೇಟ್ ಮಾಡಿಸಿ ಕೊಟ್ಟಿರುವುದು ಆತನಲ್ಲಿ ಭಯ ಹುಟ್ಟಿಸಿತ್ತು. ತನ್ನ ನಿಜ ಜಾತಿಯ ಬಗ್ಗೆ ಸಹಪಾಠಿಗಳಿಗೆ ಗೊತ್ತಾದರೆ ಗೌರವ ಹಾಳಾಗುತ್ತದೆ ಎಂಬ ಭಯ ಕಾಡಿತ್ತು. ಜೊತೆಗೆ ಓದಿನಲ್ಲಿಯೂ ವೇಮುಲ ಹಿಂದೆ ಉಳಿದಿದ್ದ. ಹೀಗಾಗಿ, ಮೃತನಿಗೆ ಹಲವಾರು ಸಮಸ್ಯೆಗಳಿದ್ದವು, ಅದು ಅವರನ್ನು ಆತ್ಮಹತ್ಯೆಗೆ ಪ್ರೇರೇಪಿಸಿವೆ ಎಂದು ತನಿಖಾ ವರದಿಯಲ್ಲಿ ಹೇಳಲಾಗಿದೆ.
2016ರ ಜನವರಿ 17ರಂದು ವೇಮುಲ ಮೃತಪಟ್ಟಾಗ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಗುರಿ ಮಾಡಿತ್ತು. ಮುಖ್ಯವಾಗಿ ಸಚಿವೆ ಸ್ಕೃತಿ ಇರಾನಿ ವಿರುದ್ಧ ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗಳು ನಡೆದಿದ್ದವು. ಆದರೆ ಈಗ ತೆಲಂಗಾಣದಲ್ಲಿರುವ ಕಾಂಗ್ರೆಸ್ ಸರ್ಕಾರ ಎಲ್ಲಾ ಆರೋಪಿಗಳನ್ನು ದೋಷಮುಕ್ತಗೊಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



