ಕಾಶ್ಮೀರದಲ್ಲಿ ಸೇನಾ ವಾಹನಗಳ ಮೇಲೆ ಉಗ್ರರ ದಾಳಿ: ಐವರು ಯೋಧರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಗೆ(ಐಎಎಫ್) ಸೇರಿದ ಒಂದು ವಾಹನ ಸೇರಿದಂತೆ ಎರಡು ವಾಹನಗಳ ಮೇಲೆ ಭಯೋತ್ಪಾದಕರು ಶನಿವಾರ ಗುಂಡಿನ ದಾಳಿ ನಡೆಸಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಗೆ(ಐಎಎಫ್) ಸೇರಿದ ಒಂದು ವಾಹನ ಸೇರಿದಂತೆ ಎರಡು ವಾಹನಗಳ ಮೇಲೆ ಭಯೋತ್ಪಾದಕರು ಶನಿವಾರ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಐವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಸಂಜೆ ಜಿಲ್ಲೆಯ ಸೂರನಕೋಟೆ ಪ್ರದೇಶದ ಸನಾಯಿ ಟಾಪ್ ಕಡೆಗೆ ವಾಹನಗಳು ತೆರಳುತ್ತಿದ್ದಾಗ ಶಶಿಧರ್ ಬಳಿ ಗುಂಡಿನ ದಾಳಿ ನಡೆದಿದೆ ಎಂದು ಅವರು ಹೇಳಿದ್ದಾರೆ.
ದಾಳಿಯಲ್ಲಿ ಐವರು ಯೋಧರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೇನೆ ಮತ್ತು ಹೆಚ್ಚಿನ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದೆ ಮತ್ತು ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ತಟಸ್ಥಗೊಳಿಸಲು ಬೃಹತ್ ಶೋಧ ಹಾಗೂ ಕಾರ್ಡನ್ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



