ಪ್ರಧಾನಿಗೆ ಸವಾಲು ಹಾಕುವ ಮೊದಲು 'ರಾಯ್ ಬರೇಲಿ' ಗೆಲ್ಲಿ: Rahul Gandhi ಕುರಿತ ವ್ಯಂಗ್ಯ ಮಾಡಿ ಸ್ಪಷ್ಟನೆ ನೀಡಿದ Kasparov
ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಅವರ ನಿರ್ಧಾರವನ್ನು ವ್ಯಂಗ್ಯ ಮಾಡಿದ್ದ ಮಾಜಿ ವಿಶ್ವ ಚೆಸ್ ಚಾಂಪಿಯನ್ ರಷ್ಯಾದ ಗ್ಯಾರಿ ಕ್ಯಾಸ್ಪರೋವ್ (garry kasparov) ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.

ನವದೆಹಲಿ: ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಅವರ ನಿರ್ಧಾರವನ್ನು ವ್ಯಂಗ್ಯ ಮಾಡಿದ್ದ ಮಾಜಿ ವಿಶ್ವ ಚೆಸ್ ಚಾಂಪಿಯನ್ ರಷ್ಯಾದ ಗ್ಯಾರಿ ಕ್ಯಾಸ್ಪರೋವ್ (garry kasparov) ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.
ಅಮೇಠಿ ಬಿಟ್ಟು ರಾಯ್ ಬರೇಲಿಯಿಂದ ಸ್ಪರ್ಧಿಸುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಡೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್ ವೈರಲ್ ಆಗಿರುವ ಹಿನ್ನೆಲೆಯಲ್ಲಿ ರಷ್ಯಾದ ಚೆಸ್ ಪಟು ಗ್ಯಾರಿ ಕಾಸ್ಪರೋವ್, 'ಭಾರತೀಯ ರಾಜಕೀಯದ ಕುರಿತಾದ ತಮ್ಮ "ಚಿಕ್ಕ ಜೋಕ್" ಇದಾಗಿದ್ದು, ನಾನು ರಾಜಕೀಯ ಪಂಡಿತನಲ್ಲ.. ಎಂದು ಹೇಳಿದ್ದಾರೆ.
ಈ ಹಿಂದೆ "ಉನ್ನತ ಪಟ್ಟಕ್ಕಾಗಿ ಸವಾಲು ಹಾಕುವ ಮೊದಲು ರಾಯ್ ಬರೇಲಿಯನ್ನು ಮೊದಲು ಗೆಲ್ಲಿರಿ" ಎಂದು ರಾಹುಲ್ ಗಾಂಧಿ ಕುರಿತು ಕ್ಯಾಸ್ಪರೋವ್ ವ್ಯಂಗ್ಯ ಮಾಡಿದ್ದರು. ಈ ಪೋಸ್ಟ್ ವ್ಯಾಪಕ ವೈರಲ್ ಆಗಿ ಪರ-ವಿರೋಧ ಚರ್ಚೆಗಳು ನಡೆಯುತ್ತಿರುವಂತೆಯೇ ತಮ್ಮ ಪ್ರಮಾದ ಅರಿವಾಗಿ ಕ್ಯಾಸ್ಪರೋವ್ ಸ್ಪಷ್ಟನೆ ನೀಡಿದ್ದಾರೆ. 61 ವರ್ಷ ವಯಸ್ಸಿನ ಕ್ಯಾಸ್ಪರೋವ್ 'ಇದು ಕೇವಲ ತಮಾಷೆ ಮತ್ತು ಅದನ್ನು ಜೋಕ್ ಆಗಿ ಮಾತ್ರ ನೋಡಬೇಕು ಎಂದು ಮನವಿ ಮಾಡಿದ್ದಾರೆ.
ರಾಯ್ ಬರೇಲಿಯಿಂದ ಗೆಲ್ಲಬೇಕು
ಗ್ಯಾರಿ ಕಾಸ್ಪರೋವ್ ಅವರು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಈ ಬಗ್ಗೆ ಒಂದು ಪೋಸ್ಟ್ನ್ನು ಹಾಕಿಕೊಂಡಿದ್ದರು. ರಾಹುಲ್ ಗಾಂಧಿ ಅವರೇ ನೀವು ಪ್ರಧಾನಿ ಆಗುವ ಕನಸು ಕಾಣುವ ಮೊದಲು ಹೆಚ್ಚಿನ ಸ್ಥಾನದಲ್ಲಿ, ರಾಯ್ ಬರೇಲಿಯಿಂದ ಗೆಲ್ಲಬೇಕು ಎಂದು ಗ್ಯಾರಿ ಅವರು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.
ಪುಟಿನ್ ಪ್ರಬಲ ಟೀಕಾಕಾರಾಗಿದ್ದ ಕ್ಯಾಸ್ಪರೋವ್
ಮಾಜಿ ವಿಶ್ವ ಚೆಸ್ ಚಾಂಪಿಯನ್, ಬರಹಗಾರ, ರಾಜಕೀಯ ತಜ್ಞ, ರಷ್ಯಾದ ಗ್ರ್ಯಾಂಡ್ ಮಾಸ್ಟರ್ ಗ್ಯಾರಿ ಕ್ಯಾಸ್ಪರೋವ್ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ರಾಜಕೀಯ ವಿಮರ್ಶಕರು. ಇವರು ಒಂದು ಸಂಧರ್ಭದಲ್ಲಿ ಪುಟಿನ್ ಅವರನ್ನು ವಿಶ್ವದ ಅತ್ಯಂತ ಅಪಾಯಕಾರಿ ವ್ಯಕ್ತಿ ಎಂದು ಕರೆದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



