ಮಧ್ಯಪ್ರದೇಶ: ಮರಳು ಮಾಫಿಯಾ, ಟ್ರ್ಯಾಕ್ಟರ್ ಹರಿಸಿ ಎಎಸ್‌ಐ ಹತ್ಯೆ!
ಮರಳು ಮಾಫಿಯಾ ದಂಧೆಯಲ್ಲಿ ತೊಡಗಿರುವವರು ಟ್ರಾಕ್ಟರ್ ಹರಿಸಿ ಎಎಸ್ ಐ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಶಹದೋಲ್ ಬಳಿ ಶನಿವಾರ ರಾತ್ರಿ ನಡೆದಿದೆ.

ಮಧ್ಯಪ್ರದೇಶ: ಮರಳು ಮಾಫಿಯಾ ದಂಧೆಯಲ್ಲಿ ತೊಡಗಿರುವವರು ಟ್ರಾಕ್ಟರ್ ಹರಿಸಿ ಎಎಸ್ ಐ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಶಹದೋಲ್ ಬಳಿ ಶನಿವಾರ ರಾತ್ರಿ ನಡೆದಿದೆ.
ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲು ಪೊಲೀಸ್ ತಂಡ ಗ್ರಾಮಕ್ಕೆ ಆಗಮಿಸಿದ ನಂತರ ಟ್ರಾಕ್ಟರ್ ಹರಿಸಿ ಎಎಸ್‌ಐ ಹತ್ಯೆ ಮಾಡಲಾಗಿದೆ.
ಶಹದೋಲ್‌ನ ನೌಧಿಯಾದಲ್ಲಿ ಈ ಘಟನೆ ನಡೆದಿದ್ದು, ಟ್ರ್ಯಾಕ್ಟರ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎಎಸ್‌ಐ ಮಹೇಂದ್ರ ಬಗ್ರಿ ಮತ್ತು ಅವರ ತಂಡವು ವಾರಂಟ್‌ನೊಂದಿಗೆ ಆರೋಪಿಯನ್ನು ಬಂಧಿಸಲು ಹೋಗಿದ್ದಾಗ ಎಎಸ್ ಐ ಹತ್ಯೆ ಮಾಡಲಾಗಿದೆ. ಟ್ರ್ಯಾಕ್ಟರ್ ಚಾಲಕನನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸಾಗರ್ ತಿಳಿಸಿದ್ದಾರೆ.
ವಿಚಾರಣೆ ವೇಳೆ ಟ್ರ್ಯಾಕ್ಟರ್ ಮಾಲೀಕನ ಮಗನೂ ಇದರಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ..ಐಪಿಸಿ ಸೆಕ್ಷನ್ 302/34, 414, 379 ಹಾಗೂ ಗಣಿಗಾರಿಕೆಗೆ ಸಂಬಂಧಿಸಿದ ವಿವಿಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



