ಮಧ್ಯ ಪ್ರದೇಶ ಕಾಂಗ್ರೆಸ್ ಶಾಸಕಿ ನಿರ್ಮಲಾ ಸಪ್ರೆ ಬಿಜೆಪಿ ಸೇರ್ಪಡೆ
ಮಧ್ಯ ಪ್ರದೇಶದ ಬಿನಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಿರ್ಮಲಾ ಸಪ್ರೆ ಅವರು ಭಾನುವಾರ ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಸಾಗರ್: ಮಧ್ಯಪ್ರದೇಶದ ಬಿನಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಿರ್ಮಲಾ ಸಪ್ರೆ ಅವರು ಭಾನುವಾರ ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ನಿರ್ಮಲಾ ಸಪ್ರೆ ಅವರು ಮಾರ್ಚ್‌ನಲ್ಲಿ ಲೋಕಸಭೆ ಚುನಾವಣೆ ಘೋಷಣೆಯಾದ ನಂತರ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮೂರನೇ ಶಾಸಕಿಯಾಗಿದ್ದಾರೆ.
ಸಪ್ರೆ ಅವರು ಸಾಗರ್ ಜಿಲ್ಲೆಯ ರಹತ್‌ಗಢದಲ್ಲಿ ಇಂದು ನಡೆದ ಬಿಜೆಪಿ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಸಮ್ಮುಖದಲ್ಲಿ ಕೇಸರಿ ಪಕ್ಷ ಸೇರಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಪ್ರೆ, ತಮ್ಮ ಕ್ಷೇತ್ರದ ಜನತೆಗೆ ಹಲವಾರು ಭರವಸೆಗಳನ್ನು ನೀಡಿದ್ದರೂ ಈಡೇರಿಸಲು ಸಾಧ್ಯವಾಗಿಲ್ಲ ಎಂದಿದ್ದಾರೆ.
ಕಾಂಗ್ರೆಸ್ ಪ್ರಸ್ತುತ ಅಧಿಕಾರದಿಂದ ಹೊರಗಿದೆ. ವಿರೋಧ ಪಕ್ಷವು ಅಭಿವೃದ್ಧಿಯ ಯಾವುದೇ ಅಜೆಂಡಾವನ್ನು ಹೊಂದಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಮೋಹನ್ ಯಾದವ್ ಅವರ ನೇತೃತ್ವದಲ್ಲಿ ನಾನು ಅಭಿವೃದ್ಧಿಯ ಹೊಳೆಗೆ ಸೇರಿಕೊಂಡಿದ್ದೇನೆ ಎಂದು ಸಪ್ರೆ ಹೇಳಿದ್ದಾರೆ.
ಚುನಾವಣಾ ಆಯೋಗವು ಮಾರ್ಚ್ 16 ರಂದು ಲೋಕಸಭೆ ಚುನಾವಣೆ ದಿನಾಂಕ ಘೋಷಿಸಿದ ನಂತರ ಮಾರ್ಚ್ 29 ರಂದು, ಛಿಂದ್ವಾರಾ ಜಿಲ್ಲೆಯ ಅಮರವಾರದ ಶಾಸಕ ಕಮಲೇಶ್ ಶಾ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು.
ಏಪ್ರಿಲ್ 30 ರಂದು ಕಾಂಗ್ರೆಸ್ ಶಾಸಕ ರಾಮ್ ನಿವಾಸ್ ರಾವತ್ ಅವರು ಅತ್ಯಂತ ಹಳೆಯ ಪಕ್ಷವನ್ನು ತೊರೆದು ಬಿಜೆಪಿ ಸೇರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



