ದೆಹಲಿ ಅಬಕಾರಿ ನೀತಿ ಹಗರಣ: ಬಿಆರ್‌ಎಸ್ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮಂಗಳವಾರ ದೆಹಲಿ ನ್ಯಾಯಾಲಯ ಮೇ 14 ರವರೆಗೆ ವಿಸ್ತರಿಸಿದೆ.

ನವದೆಹಲಿ: ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮಂಗಳವಾರ ದೆಹಲಿ ನ್ಯಾಯಾಲಯ ಮೇ 14 ರವರೆಗೆ ವಿಸ್ತರಿಸಿದೆ.
ಸಿಬಿಐ ಮತ್ತು ಇ.ಡಿ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ತೆಲಂಗಾಣ ಎಂಎಲ್‌ಸಿಯ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಅವರ ಕಸ್ಟಡಿಯನ್ನು ವಿಸ್ತರಿಸಿ ಆದೇಶಿಸಿದ್ದಾರೆ.
ವಿಚಾರಣೆಯ ಸಂದರ್ಭದಲ್ಲಿ, ಜಾರಿ ನಿರ್ದೇಶನಾಲಯವು ತನಿಖೆಯು ನಿರ್ಣಾಯಕ ಹಂತದಲ್ಲಿದೆ ಮತ್ತು ಕವಿತಾ ವಿರುದ್ಧ ಒಂದು ವಾರದೊಳಗೆ ಚಾರ್ಜ್ ಶೀಟ್ ಸಲ್ಲಿಸಬಹುದು ಎಂದು ನ್ಯಾಯಾಲಯಕ್ಕೆ ತಿಳಿಸಿತು.
ಸದ್ಯ ರದ್ದಾಗಿರುವ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ 46 ವರ್ಷದ ಬಿಆರ್‌ಎಸ್ ನಾಯಕಿ ಕವಿತಾ ಅವರನ್ನು ಮಾರ್ಚ್ 15ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನಿವಾಸದಿಂದ ಇ.ಡಿ ಅಧಿಕಾರಿಗಳು ಬಂಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



