ದೇಶ

3ನೇ ಹಂತದ ಲೋಕಸಭಾ ಚುನಾವಣೆ: ಅಸ್ಸಾಂನಲ್ಲಿ ಅತಿ ಹೆಚ್ಚು ಮತದಾನ, ಮಹಾರಾಷ್ಟ್ರದಲ್ಲಿ ಅತಿ ಕಡಿಮೆ

11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಮಂಗಳವಾರ ಮುಕ್ತಾಯವಾಗಿದ್ದು, ಸುಮಾರು ಶೇ. 62 ರಷ್ಟು ಮತದಾನವಾಗಿದೆ.

3ನೇ ಹಂತದ ಲೋಕಸಭಾ ಚುನಾವಣೆ: ಅಸ್ಸಾಂನಲ್ಲಿ ಅತಿ ಹೆಚ್ಚು ಮತದಾನ, ಮಹಾರಾಷ್ಟ್ರದಲ್ಲಿ ಅತಿ ಕಡಿಮೆ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಕರ್ನಾಟಕ ಸೇರಿದಂತೆ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಮಂಗಳವಾರ ಮುಕ್ತಾಯವಾಗಿದ್ದು, ಸುಮಾರು ಶೇ. 62 ರಷ್ಟು ಮತದಾನವಾಗಿದೆ.

ಅಸ್ಸಾಂನಲ್ಲಿ ಅತಿ ಹೆಚ್ಚು ಅಂದರೆ ಶೇ.75.53 ಮತದಾನವಾಗಿದ್ದು, ಗೋವಾದಲ್ಲಿ ಶೇ.74.47 ಮತ್ತು ಪಶ್ಚಿಮ ಬಂಗಾಳ ಶೇ.73.93, ಮಹಾರಾಷ್ಟ್ರದಲ್ಲಿ ಅತಿ ಕಡಿಮೆ ಶೇ.55.54, ಬಿಹಾರ ಶೇ.56.55 ಮತ್ತು ಗುಜರಾತ್ ನಲ್ಲಿ ಶೇ.56.98 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗದ ಅಂಕಿಅಂಶಗಳು ತಿಳಿಸಿವೆ.

ಚುನಾವಣಾ ಆಯೋಗದ ಪ್ರಕಾರ, ಅಂಕಿಅಂಶಗಳು "ಅಂದಾಜು ಟ್ರೆಂಡ್" ಇದಾಗಿದ್ದು, ದತ್ತಾಂಶ ಸಂಗ್ರಹವಾಗುತ್ತಿದ್ದಂತೆ ಏರಿಕೆಯಾಗುವ ಸಾಧ್ಯತೆಯಿದೆ.

ಮತದಾನವು ಮುಕ್ತಾಯಗೊಳ್ಳುವ ಅಧಿಕೃತ ಸಮಯ ಸಂಜೆ 6 ಗಂಟೆಯಾಗಿದ್ದರೆ, ನಿಗದಿತ ಮತದಾನದ ಅವಧಿಯ ಅಂತ್ಯದ ಮೊದಲು ಸರದಿಯಲ್ಲಿ ಬಂದ ಮತದಾರರು ತಮ್ಮ ಹಕ್ಕು ಚಲಾಯಿಸಲು ಅವಕಾಶ ನೀಡಲಾಗಿದೆ.

ಇತರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೈಕಿ ಉತ್ತರ ಪ್ರದೇಶ ಶೇ.57.34, ಛತ್ತೀಸ್‌ಗಢ ಶೇ.67.64, ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯುನಲ್ಲಿ ಶೇ.65.23, ಕರ್ನಾಟಕ ಶೇ.68.85 ಮತ್ತು ಮಧ್ಯಪ್ರದೇಶದಲ್ಲಿ ಶೇ.64.02 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಇಂದು ನಡೆದ ಮೂರನೇ ಹಂತದಲ್ಲಿ 120 ಮಹಿಳೆಯರು ಸೇರಿದಂತೆ ಒಟ್ಟು 1300 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕೇಂದ್ರ ಸಚಿವರಾದ ಅಮಿತ್ ಶಾ (ಗಾಂಧಿನಗರ), ಜ್ಯೋತಿರಾದಿತ್ಯ ಸಿಂಧಿಯಾ (ಗುಣ), ಮನ್ಸುಖ್ ಮಾಂಡವಿಯಾ ಸೇರಿದಂತೆ 1300 ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.