ಹಿರಿಯ ನಟಿ ವೈಜಯಂತಿಮಾಲಾ, ಚಿರಂಜೀವಿ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ!
ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ತೆಲುಗು ನಟ ಕೊನಿಡೆಲಾ ಚಿರಂಜೀವಿ, ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶೆ ದಿವಂಗತ ಎಂ ಫಾತಿಮಾ ಬೀವಿ ಮತ್ತಿತರ ವಿವಿಧ ಕ್ಷೇತ್ರಗಳ ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು.

ನವದೆಹಲಿ: ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ತೆಲುಗು ನಟ ಕೊನಿಡೆಲಾ ಚಿರಂಜೀವಿ, ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶೆ ದಿವಂಗತ ಎಂ ಫಾತಿಮಾ ಬೀವಿ ಮತ್ತಿತರ ವಿವಿಧ ಕ್ಷೇತ್ರಗಳ ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು.
ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಬಾಂಬೆ ಸಮಾಚಾರ ಪತ್ರಿಕೆ ಮಾಲೀಕ ಹಾರ್ಮುಸ್ಜಿ ಎನ್ ಕಾಮಾ, ಬಿಜೆಪಿ ನಾಯಕ ಓ ರಾಜಗೋಪಾಲ್, ಲಡಾಖ್‌ನ ಆಧ್ಯಾತ್ಮಿಕ ನಾಯಕ ತೊಗ್ಡಾನ್ ರಿಂಪೋಚೆ, ತಮಿಳು ನಟ ದಿವಂಗತ "ಕ್ಯಾಪ್ಟನ್" ವಿಜಯಕಾಂತ್ , ಗುಜರಾತಿ ಪತ್ರಿಕೆ "ಜನ್ಮಭೂಮಿ" ಸಿಇಒ ಕುಂದನ್ ವ್ಯಾಸ್ ಅವರಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.
90 ವರ್ಷದ ವೈಜಯಂತಿ ಮಾಲಾ ಮತ್ತು ಚಿರಂಜೀವಿ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿದರೆ, ಬೀವಿ, ಕಾಮ, ರಾಜಗೋಪಾಲ್, ವಿಜಯಕಾಂತ್, ರಿಂಪೋಚೆ ಮತ್ತು ವ್ಯಾಸ್ ಅವರಿಗೆ ಪದ್ಮಭೂಷಣ ನೀಡಲಾಯಿತು. ಬೀವಿ, ವಿಜಯಕಾಂತ್ ಮತ್ತು ರಿಂಪೋಚೆ ಅವರ ಕುಟುಂಬದ ಸದಸ್ಯರು ಪ್ರಶಸ್ತಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧಂಖರ್, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ.
ಪ್ರತಿ ವರ್ಷ ಗಣರಾಜ್ಯೋತ್ಸವದ ಮುನ್ನಾದಿನದಂದು ಪ್ರಶಸ್ತಿಗಳನ್ನು ಪ್ರಕಟಿಸಲಾಗುತ್ತದೆ. 2024 ರಲ್ಲಿ ಐದು ಪದ್ಮ ವಿಭೂಷ, 17 ಪದ್ಮ ಭೂಷಣ ಮತ್ತು 110 ಪದ್ಮ ಪ್ರಶಸ್ತಿ ಸೇರಿದಂತೆ ಒಟ್ಟಾರೇ 132 ಪ್ರಶಸ್ತಿಗಳನ್ನು ರಾಷ್ಟ್ರಪತಿ ಘೋಷಿಸಿದ್ದರು.
ಪ್ರಶಸ್ತಿ ಪುರಸ್ಕೃತರಲ್ಲಿ ಅರ್ಧಕ್ಕಿಂತ ಹೆಚ್ಚು ಜನರಿಗೆ ಏಪ್ರಿಲ್ 22 ರಂದು ನೀಡಲಾಗಿತ್ತು. ಉಳಿದವರಿಗೆ ಗುರುವಾರ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



