ದೇಶ

ಪಶ್ಚಿಮ ಬಂಗಾಳ: ಲೈಂಗಿಕ ಕಿರುಕುಳ ಪ್ರಕರಣ, ಜನಸಾಮಾನ್ಯರಿಗೆ ರಾಜಭವನದ ಸಿಸಿಟಿವಿ ದೃಶ್ಯಾವಳಿ ತೋರಿಸಿದ ರಾಜ್ಯಪಾಲ!

ರಾಜಭವನದ ಮಹಿಳಾ ಉದ್ಯೋಗಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ ವಿ ಆನಂದ ಬೋಸ್ ಅವರು ಸುಮಾರು 100 ಜನರಿಗೆ ಮೇ 2ರ ಸಿಸಿಟಿವಿ ದೃಶ್ಯಾವಳಿಗಳನ್ನು ತೋರಿಸಿದ್ದಾರೆ.

ಪಶ್ಚಿಮ ಬಂಗಾಳ: ಲೈಂಗಿಕ ಕಿರುಕುಳ ಪ್ರಕರಣ, ಜನಸಾಮಾನ್ಯರಿಗೆ ರಾಜಭವನದ ಸಿಸಿಟಿವಿ ದೃಶ್ಯಾವಳಿ ತೋರಿಸಿದ ರಾಜ್ಯಪಾಲ!
ಪಶ್ಚಿಮ ಬಂಗಾಳ ರಾಜ್ಯಪಾಲ ಸಿವಿ ಆನಂದ ಬೋಸ್
Published On :

ಕೋಲ್ಕತ್ತಾ: ರಾಜಭವನದ ಮಹಿಳಾ ಉದ್ಯೋಗಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ಅವರು ಸುಮಾರು 100 ಜನರಿಗೆ ಮೇ 2ರ ಸಿಸಿಟಿವಿ ದೃಶ್ಯಾವಳಿಗಳನ್ನು ತೋರಿಸಿದ್ದಾರೆ.

ರಾಜಭವನದ ನೆಲ ಮಹಡಿಯಲ್ಲಿರುವ ಸಭಾಂಗಣದಲ್ಲಿ ಮೇ 2 ರ ಸಂಜೆ 5.30 ರಿಂದ ಮುಖ್ಯಧ್ವಾರದಲ್ಲಿರುವ ಎರಡು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಜನರಿಗೆ ತೋರಿಸಲಾಗುತ್ತಿದೆ ಮತ್ತು ಸ್ಕ್ರೀನಿಂಗ್ ನಡೆಯುತ್ತಿದೆ.

ರಾಜಭವನದ ಗುತ್ತಿಗೆ ಮಹಿಳಾ ಉದ್ಯೋಗಿಯೊಬ್ಬರು ಶುಕ್ರವಾರ ಕೋಲ್ಕತ್ತಾ ಪೊಲೀಸರಿಗೆ ಲಿಖಿತ ದೂರು ಸಲ್ಲಿಸಿದ್ದು, ರಾಜ್ಯಪಾಲರ ಭವನದಲ್ಲಿ ಬೋಸ್ ತನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

"ರಾಜಕಾರಣಿ" ಮಮತಾ ಬ್ಯಾನರ್ಜಿ ಮತ್ತು ಆಕೆಯ ಪೊಲೀಸರನ್ನು ಹೊರತುಪಡಿಸಿ ಸಾಮಾನ್ಯ ಜನರಿಗೆ ಸಿಸಿಟಿವಿ ದೃಶ್ಯಾವಳಿಗಳನ್ನು ತೋರಿಸುವುದಾಗಿ ಬೋಸ್ ಬುಧವಾರ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.