ಪುಣೆ: ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯರ ಫೋಟೋ ಕ್ಲಿಕ್ಕಿಸಿ, ಸ್ನೇಹಿತನಿಗೆ ಕಳುಹಿಸುತ್ತಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ವಿರುದ್ಧ ಕೇಸ್ ದಾಖಲು
ಹಾಸ್ಟೆಲ್ನಲ್ಲಿರುವ ಇತರ ವಿದ್ಯಾರ್ಥಿನಿಯರ ಫೋಟೋಗಳನ್ನು ಕ್ಲಿಕ್ಕಿಸಿ ತನ್ನ ಸ್ನೇಹಿತನಿಗೆ ಕಳುಹಿಸಿದ ಆರೋಪದ ಮೇಲೆ ನಗರದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರ ವಿರುದ್ಧ ಪುಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪುಣೆ: ಹಾಸ್ಟೆಲ್ನಲ್ಲಿರುವ ಇತರ ವಿದ್ಯಾರ್ಥಿನಿಯರ ಫೋಟೋಗಳನ್ನು ಕ್ಲಿಕ್ಕಿಸಿ ತನ್ನ ಸ್ನೇಹಿತನಿಗೆ ಕಳುಹಿಸಿದ ಆರೋಪದ ಮೇಲೆ ನಗರದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರ ವಿರುದ್ಧ ಪುಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಖಾಸಗೀ ಸಂಗತಿಗಳನ್ನು ಸೋರಿಕೆ ಮಾಡಿದ ಯುವತಿ ಮತ್ತು ಆಕೆಯ ಸ್ನೇಹಿತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಸಿ(ವೋಯರಿಸಂ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಆರೋಪಿ ಯುವತಿ ನಗರದ ಶಿವಾಜಿನಗರ ಪ್ರದೇಶದ ಪ್ರಸಿದ್ಧ ಕಾಲೇಜಿನಲ್ಲಿ ಎರಡನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದು, ಹಾಸ್ಟೆಲ್ನಲ್ಲಿ ವಾಸಿಸುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಹುಡುಗಿ ತನ್ನ ಹಾಸ್ಟೆಲ್ ರೂಮ್ಮೇಟ್ಗಳ ಫೋಟೋಗಳನ್ನು ಕ್ಲಿಕ್ ಮಾಡಿ, ಕ್ಯಾಂಪಸ್ನ ಹೊರಗಿನ ಸ್ನೇಹಿತನೊಂದಿಗೆ ಹಂಚಿಕೊಳ್ಳುತ್ತಿರುವ ಬಗ್ಗೆ ಇತರ ವಿದ್ಯಾರ್ಥಿನಿಯರು ಕಾಲೇಜ್ ಆಡಳಿತ ಮಂಡಳಿಗೆ ದೂರು ನೀಡಿದ್ದರು.
ಸಂಸ್ಥೆಯು ಆಂತರಿಕ ವಿಚಾರಣೆ ನಡೆಸಿದ ನಂತರ ಪೊಲೀಸರಿಗೆ ದೂರು ನೀಡಿತ್ತು.
"ನಾವು ಕೆಲವು ಫೋಟೋಗಳನ್ನು ಪರಿಶೀಲಿಸಿದ್ದೇವೆ ಮತ್ತು ಅವುಗಳು ಅಶ್ಲೀಲವಾಗಿಲ್ಲ ಎಂದು ಕಂಡುಬಂದಿದೆ. ಆದರೆ ಆಕೆಯ ಕೊಠಡಿ ಸಹವಾಸಿಗಳಿಗೆ ತಿಳಿಯದಂತೆ ಅವುಗಳನ್ನು ಹಂಚಿಕೊಳ್ಳಲಾಗಿದೆ" ಎಂದು ಶಿವಾಜಿನಗರ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



