ದೇಶ

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ: ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬಿಜೆಪಿ ದೇಶದ ಸಂವಿಧಾನ ಬದಲಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪದೇ ಪದೆ ಹೇಳುತ್ತಿರುವುದನ್ನು ವಿರೋಧಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿರುವುದಾಗಿ ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ.

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ: ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ರಾಮದಾಸ್ ಅಠಾವಳೆ
Published On :

ಮುಂಬೈ: ಬಿಜೆಪಿ ದೇಶದ ಸಂವಿಧಾನ ಬದಲಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪದೇ ಪದೆ ಹೇಳುತ್ತಿರುವುದನ್ನು ವಿರೋಧಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿರುವುದಾಗಿ ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ಈ ಹೇಳಿಕೆ ನೀಡುವುದನ್ನು ನಿಷೇಧಿಸಬೇಕು ಎಂದು ಪ್ರಮುಖ ದಲಿತ ನಾಯಕ ಅಠಾವಳೆ ಬುಧವಾರ ಸುದ್ದಿಗಾರರಿಗೆ ತಿಳಿಸಿದರು.

'ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾಯಿಸಲು ಯೋಜಿಸುತ್ತಿದೆ ಎಂದು ರಾಹುಲ್ ಗಾಂಧಿ ಆಗಾಗ್ಗೆ ಹೇಳುತ್ತಿದ್ದರು. ಆದರೆ, ಪ್ರಧಾನಿ ನರೇಂದ್ರ ಮೋದಿ ಈ ಆರೋಪಗಳನ್ನು ಹಲವಾರು ಬಾರಿ ತಳ್ಳಿಹಾಕಿದ್ದಾರೆ' ಎಂದು ಅವರು ಹೇಳಿದರು.

ರಾಹುಲ್ ಅವರು ಆಗಾಗ್ಗೆ ನೀಡುತ್ತಿರುವ ಈ ಹೇಳಿಕೆಗಳ ವಿರುದ್ಧ ನಾನು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇನೆ. ಅವರು ಹಾಗೆ ಹೇಳುವುದನ್ನು ಆಯೋಗ ನಿಷೇಧಿಸಬೇಕು ಮತ್ತು ಅವರ ವಿರುದ್ಧ ಕೆಲವು ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.