ದೇಶ

ಕಾಂಗ್ರೆಸ್ 50 ಸ್ಥಾನವನ್ನೂ ಗೆಲ್ಲುವುದಿಲ್ಲ; ವಿರೋಧ ಪಕ್ಷದ ಸ್ಥಾನದಲ್ಲೂ ಕೂರುವುದಿಲ್ಲ: ಮೋದಿ

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 50 ಸ್ಥಾನಗಳನ್ನು ಗೆಲ್ಲುವುದಿಲ್ಲ ಮತ್ತು ಚುನಾವಣೆಯ ನಂತರ ವಿರೋಧ ಪಕ್ಷದ ಸ್ಥಾನಮಾನವನ್ನು ಪಡೆಯಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕಾಂಗ್ರೆಸ್ 50 ಸ್ಥಾನವನ್ನೂ ಗೆಲ್ಲುವುದಿಲ್ಲ; ವಿರೋಧ ಪಕ್ಷದ ಸ್ಥಾನದಲ್ಲೂ ಕೂರುವುದಿಲ್ಲ: ಮೋದಿ
ನರೇಂದ್ರ ಮೋದಿ
Published On :

ಪುಲ್ಭಾನಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 50 ಸ್ಥಾನಗಳನ್ನು ಗೆಲ್ಲುವುದಿಲ್ಲ ಮತ್ತು ಚುನಾವಣೆಯ ನಂತರ ವಿರೋಧ ಪಕ್ಷದ ಸ್ಥಾನಮಾನವನ್ನು ಪಡೆಯಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಒಡಿಶಾದ ಕಂಧಮಲ್ ಲೋಕಸಭಾ ಕ್ಷೇತ್ರದ ಫುಲ್ಬಾನಿಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ "ಡಬಲ್ ಇಂಜಿನ್" ಸರ್ಕಾರವನ್ನು ರಚಿಸಲಾಗುವುದು ಮತ್ತು "ಒಡಿಯಾ ಭಾಷೆ ಮತ್ತು ಸಂಸ್ಕೃತಿಯನ್ನು ಅರ್ಥಮಾಡಿಕೊಳ್ಳುವ ಮಣ್ಣಿನ ಮಗ ಅಥವಾ ಮಗಳನ್ನು" ಮುಖ್ಯಮಂತ್ರಿಯನ್ನಾಗಿ ಮಾಡಲಾಗುವುದು ಎಂದು ಪ್ರತಿಪಾದಿಸಿದರು.

ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರದ ಹಿಂದಿನ ಬಿಜೆಪಿ ಸರ್ಕಾರದ ಸಾಧನೆಗಳನ್ನು ಸ್ಮರಿಸಿದ ಅವರು, 26 ವರ್ಷಗಳ ಹಿಂದೆ ಇದೇ ದಿನದಂದು ಪೋಖ್ರಾನ್ ಪರೀಕ್ಷೆಗಳು ವಿಶ್ವದಾದ್ಯಂತ ದೇಶದ ವರ್ಚಸ್ಸನ್ನು ಹೆಚ್ಚಿಸಿವೆ ಎಂದು ಹೇಳಿದರು. ತಮ್ಮ ಸರ್ಕಾರ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸುವ ಮೂಲಕ 500 ವರ್ಷಗಳ ಜನರ ಕಾಯುವಿಕೆಯನ್ನು ಕೊನೆಗೊಳಿಸಿದೆ ಎಂದು ಅವರು ಪ್ರತಿಪಾದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.