ದೇಶ

ಇಂದಿನಿಂದ ಬದರಿನಾಥ ದೇವಾಲಯ ಭಕ್ತರ ದರ್ಶನಕ್ಕೆ ಮುಕ್ತ

ಉತ್ತರಾಖಂಡ್ ನ ಗರ್ವಾಲ್ ಹಿಮಾಲಯದಲ್ಲಿರುವ ಬದರಿನಾಥ ದೇವಾಲಯ ಇಂದಿನಿಂದ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ.

ಇಂದಿನಿಂದ ಬದರಿನಾಥ ದೇವಾಲಯ ಭಕ್ತರ ದರ್ಶನಕ್ಕೆ ಮುಕ್ತ
ಬದರಿನಾಥ ದೇವಾಲಯ — online desk
Published On :

ಉತ್ತರಾಖಂಡ್: ಉತ್ತರಾಖಂಡ್ ನ ಗರ್ವಾಲ್ ಹಿಮಾಲಯದಲ್ಲಿರುವ ಬದರಿನಾಥ ದೇವಾಲಯ ಇಂದಿನಿಂದ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ. ಚಳಿಗಾಲದ ಋತುವಿನಲ್ಲಿ ಬಂದ್ ಆಗಿದ್ದ ದೇವಾಲಯ ಈಗ ಮತ್ತೆ ಬಾಗಿಲು ತೆರೆದಿದೆ.

ಬದರಿ ಕ್ಷೇತ್ರಕ್ಕೆ ಭಕ್ತರ ಪ್ರವೇಶ ಮುಕ್ತವಾದ ಬಳಿಕ, ಬದರಿನಾಥ್, ಕೇದಾರನಾಥ್, ಯಮುನೋತ್ರಿ ಹಾಗೂ ಗಂಗೋತ್ರಿ ಪ್ರದೇಶಗಳಿಗೆ ಚಾರ್ ಧಾಮ್ ಯಾತ್ರೆ ಆರಂಭವಾಗಿದೆ. ವೇದ ಮಂತ್ರಗಳೊಂದಿಗೆ ಪೂಜೆ ಸಲ್ಲಿಸಿ ದೇವಾಲಯದ ಬಾಗಿಲು ತೆಗೆಯಲಾಗಿದೆ. ಹೂವುಗಳಿಂದ ಅಲಂಕೃತಗೊಂಡಿದ್ದ ದೇವಾಲಯದ ಆವರಣದಲ್ಲಿ ಮಳೆಯ ನಡುವೆಯೂ ಭಕ್ತರು ಸಮಾರಂಭವನ್ನು ವೀಕ್ಷಿಸಲು ಜಮಾಯಿಸಿದ್ದರು. ಮುಂಜಾನೆ 4 ಗಂಟೆಗೆ ಬಾಗಿಲು ತೆರೆಯುವ ಪ್ರಕ್ರಿಯೆ ಆರಂಭವಾಯಿತು.

ಈ ಸಂದರ್ಭದಲ್ಲಿ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಜನತೆಗೆ ಶುಭಾಶಯ ಕೋರಿದರು.

ಶುಕ್ರವಾರ ಅಕ್ಷಯ ತೃತೀಯ ಸಂದರ್ಭದಲ್ಲಿ ಕೇದಾರನಾಥ, ಯಮ್ಯುನೋತ್ರಿ ಮತ್ತು ಗಂಗೋತ್ರಿ ದೇವಾಲಯಗಳ ಬಾಗಿಲು ಭಕ್ತರಿಗೆ ತೆರೆಯಲಾಗಿದೆ.

ಅಧಿಕೃತ ಅಂಕಿ-ಅಂಶಗಳ ಪ್ರಕಾರ, ಶನಿವಾರ ಸಂಜೆ 4 ಗಂಟೆಯವರೆಗೆ, 7,37,885 ಜನರು ಬದರಿನಾಥ ದರ್ಶನಕ್ಕಾಗಿ ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಂಡಿದ್ದಾರೆ. ಕಳೆದ ವರ್ಷ 18,39,591 ಮಂದಿ ದೇಗುಲಕ್ಕೆ ಭೇಟಿ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.