ದೇಶ

ದೆಹಲಿ ಸಿಎಂ ಆಪ್ತ ಕಾರ್ಯದರ್ಶಿಯಿಂದ ನನ್ನ ಮೇಲೆ ಹಲ್ಲೆ, ಅನುಚಿತ ವರ್ತನೆ: AAP ಸಂಸದೆ ಸ್ವಾತಿ ಮಲಿವಾಲ್ ಆರೋಪ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರು ಗಂಭೀರ ಆರೋಪ ಮಾಡಿದ್ದಾರೆ.

ದೆಹಲಿ ಸಿಎಂ ಆಪ್ತ ಕಾರ್ಯದರ್ಶಿಯಿಂದ ನನ್ನ ಮೇಲೆ ಹಲ್ಲೆ, ಅನುಚಿತ ವರ್ತನೆ: AAP ಸಂಸದೆ ಸ್ವಾತಿ ಮಲಿವಾಲ್ ಆರೋಪ
ಸ್ವಾತಿ ಮಲಿವಾಲ್
Published On :

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಎಎಪಿ ರಾಜ್ಯಸಭಾ ಸದಸ್ಯೆ ಮತ್ತು ಮಾಜಿ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ(ಡಿಸಿಡಬ್ಲ್ಯೂ) ಸ್ವಾತಿ ಮಲಿವಾಲ್ ಅವರು ಸೋಮವಾರ ಗಂಭೀರ ಆರೋಪ ಮಾಡಿದ್ದಾರೆ.

ಸಿಎಂ ನಿವಾಸದೊಳಗೆ ನನ್ನನ್ನು ಥಳಿಸಲಾಗಿದೆ ಎಂದು ಮಲಿವಾಲ್ ಆರೋಪಿಸಿದ್ದಾರೆ.

ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಭಿಬವ್ ಕುಮಾರ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಮತ್ತು ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಎಂದು ಆಪ್ ಸಂಸದೆ ಆರೋಪಿಸಿದ್ದಾರೆ.

ಮಾಧ್ಯಮಗಳ ವರದಿಗಳ ಪ್ರಕಾರ, ಮಲಿವಾಲ್ ಅವರು ದೆಹಲಿ ಪೊಲೀಸರಿಗೆ ಕರೆ ಮಾಡಿ ದೂರು ನೀಡಿದ್ದು, ತಕ್ಷಣವೇ ಪೊಲೀಸರು ಸಿಎಂ ನಿವಾಸಕ್ಕೆ ಆಗಮಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.