ದೇಶ

Video: ಮತದಾನಕ್ಕೆ ಸರತಿ ಸಾಲಲ್ಲಿ ಬಾರದ ಶಾಸಕ, ಪ್ರಶ್ನಿಸಿದ ಮತದಾರನ ಮೇಲೆ ಹಲ್ಲೆ; ತಿರುಗಿ 'ಕಪಾಳಮೋಕ್ಷ' ಮಾಡಿದ Voter!

ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ 4ನೇ ಹಂತದ ಮತದಾನ ಚಾಲ್ತಿಯಲ್ಲಿರುವಂತೆಯೇ ಅತ್ತ ಆಂಧ್ರ ಪ್ರದೇಶದಲ್ಲಿ ಮತದಾರನೋರ್ವ ಸರತಿ ಸಾಲಲ್ಲಿ ನಿಲ್ಲದ ಶಾಸಕನಿಗೇ ಕಪಾಳಮೋಕ್ಷ ಮಾಡಿರುವ ಘಟನೆ ವರದಿಯಾಗಿದೆ.

Video: ಮತದಾನಕ್ಕೆ ಸರತಿ ಸಾಲಲ್ಲಿ ಬಾರದ ಶಾಸಕ, ಪ್ರಶ್ನಿಸಿದ ಮತದಾರನ ಮೇಲೆ ಹಲ್ಲೆ; ತಿರುಗಿ 'ಕಪಾಳಮೋಕ್ಷ' ಮಾಡಿದ Voter!
ಮತದಾರನ ಮೇಲೆ ಹಲ್ಲೆ ಮಾಡಿದ ತೆನಾಲಿ ಶಾಸಕ
Published On :

ಗುಂಟೂರು: ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ 4ನೇ ಹಂತದ ಮತದಾನ ಚಾಲ್ತಿಯಲ್ಲಿರುವಂತೆಯೇ ಅತ್ತ ಆಂಧ್ರ ಪ್ರದೇಶದಲ್ಲಿ ಮತದಾರನೋರ್ವ ಸರತಿ ಸಾಲಲ್ಲಿ ನಿಲ್ಲದ ಶಾಸಕನಿಗೇ ಕಪಾಳಮೋಕ್ಷ ಮಾಡಿರುವ ಘಟನೆ ವರದಿಯಾಗಿದೆ.

ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ತೆನಾಲಿ ಮತಗಟ್ಟೆಯೊಂದರಲ್ಲಿ ಈ ಘಟನೆ ನಡೆದಿದ್ದು, ಮತದಾರ ಶಾಸಕನಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಮೂಲಗಳ ಪ್ರಕಾರ ತೆನಾಲಿ ಶಾಸಕ ಮತ್ತು ವೈಸಿಪಿ ಅಭ್ಯರ್ಥಿ ಅನ್ನಬತುನಿ ಶಿವಕುಮಾರ್ ಇಂದು ಮತದಾನಕ್ಕೆ ಆಗಮಿಸಿದಾಗ ಇತರೆ ಮತದಾರರೊಂದಿಗೆ ಸರತಿ ಸಾಲಲ್ಲಿ ನಿಲ್ಲದೇ ನೇರವಾಗಿ ಮತಗಟ್ಟೆಯೊಳಗೇ ಪ್ರವೇಶ ಮಾಡಲು ಯತ್ನಿಸಿದ್ದಾರೆ. ಇದನ್ನು ಕಂಡ ಮತದಾರರೊಬ್ಬರು ಅದನ್ನು ಪ್ರಶ್ನಿಸಿದ್ದು, ಇದರಿಂದ ಆಕ್ರೋಶಗೊಂಡ ಶಾಸಕ ಶಿವಕುಮಾರ್ ನೋಡ ನೋಡುತ್ತಲೇ ಪ್ರಶ್ನಿಸಿದ ಮತದಾರನ ಕಪಾಳಕ್ಕೆ ಹೊಡೆದಿದ್ದಾರೆ.

ಈ ವೇಳೆ ಮತದಾರ ಕೂಡ ಶಾಸಕ ಶಿವಕುಮಾರ್ ಗೆ ಕಪಾಳಮೋಕ್ಷ ಮಾಡಿದ್ದು, ಈ ವೇಳೆ ಶಿವಕುಮಾರ್ ಜೊತೆಗಿದ್ದ ಆತನ ಬೆಂಬಲಿಗರು ಹಿಂದೆ ಮುಂದೆ ನೋಡದೆ ಮತದಾರನ ಮೇಲೆ ಮುಗಿಬಿದ್ದು ಸಾಮೂಹಿಕ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಮತದಾರನನ್ನು ಹೊರಗೆ ಎಳೆದೊಯ್ದಿದ್ದಾರೆ. ಈ ವೇಳೆ ಭದ್ರತೆಗೆ ನಿಯೋಜಿಸಿದ್ದ ಪೊಲೀಸರು ಮಧ್ಯ ಪ್ರವೇಶಿಸಿ ಗಲಾಟೆ ನಿಯಂತ್ರಿಸಿದ್ದಾರೆ.

ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದ್ದು, ಶಾಸಕನ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.