ದೇಶ

ಮಹಾರಾಷ್ಟ್ರ: ಕೋವಿಡ್ ಹೊಸ ರೂಪಾಂತರಿ ಪತ್ತೆ, 91 ಪ್ರಕರಣ ದಾಖಲು

ದೇಶದಲ್ಲಿ ಮತ್ತೆ ಕೊರೋನಾ ಆತಂಕ ಶುರುವಾಗಿದೆ. ಮಹಾರಾಷ್ಟ್ರದಲ್ಲಿ ಕೋವಿಡ್ ಹೊಸ ರೂಪಾಂತರಿ KP.2ನ 92 ಪ್ರಕರಣಗಳು ದಾಖಲಾಗಿವೆ. ಪುಣೆಯಲ್ಲಿ 51 ಕೇಸ್ ಗಳು ಪತ್ತೆಯಾಗಿರುವುದಾಗಿ ಆರೋಗ್ಯ ಇಲಾಖೆ ಸೋಮವಾರ ತಿಳಿಸಿದೆ.

ಮಹಾರಾಷ್ಟ್ರ: ಕೋವಿಡ್ ಹೊಸ ರೂಪಾಂತರಿ ಪತ್ತೆ, 91 ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ
Published On :

ಮುಂಬೈ: ದೇಶದಲ್ಲಿ ಮತ್ತೆ ಕೊರೋನಾ ಆತಂಕ ಶುರುವಾಗಿದೆ. ಮಹಾರಾಷ್ಟ್ರದಲ್ಲಿ ಕೋವಿಡ್ ಹೊಸ ರೂಪಾಂತರಿ KP.2ನ 92 ಪ್ರಕರಣಗಳು ದಾಖಲಾಗಿವೆ. ಪುಣೆಯಲ್ಲಿ 51 ಕೇಸ್ ಗಳು ಪತ್ತೆಯಾಗಿರುವುದಾಗಿ ಆರೋಗ್ಯ ಇಲಾಖೆ ಸೋಮವಾರ ತಿಳಿಸಿದೆ.

ಥಾಣೆಯಲ್ಲಿ ಕೊರೊನಾ ಹೊಸ ವೈರಸ್‌ ಓಮಿಕ್ರಾನ್ ಸಬ್‌ವೇರಿಯಂಟ್ KP.2ನ 20 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಅಮರಾವತಿ, ಛತ್ರಪತಿ ಸಾಂಬಾಜಿ ನಗರದಲ್ಲಿ ತಲಾ 7, ಸೊಲ್ಲಾಪುರದಲ್ಲಿ 2 ಹಾಗೂ ಸಾಂಗ್ಲಿ, ಲಾಟೂರ್, ಅಹಮದನಗರ, ನಾಸಿಕ್ ನಲ್ಲಿ ತಲಾ ಒಂದು ಪ್ರಕರಣ ಪತ್ತೆಯಾಗಿದೆ ಎಂದು ರಾಜ್ಯದ ಜೀನೋಮ್ ಸೀಕ್ವೆನ್ಸಿಂಗ್ ಸಂಯೋಜಕ, ಡಾ ರಾಜೇಶ್ ತಿಳಿಸಿದ್ದಾರೆ.

ಸೋಮವಾರ ಮುಂಬೈ ಮತ್ತು ಪುಣೆ ನಗರದಲ್ಲಿ ಕೋವಿಡ್-19 ನ ಆರು ಹೊಸ ಪ್ರಕರಣ ದಾಖಲಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.