'ನನ್ನ ಕುಟುಂಬ ರಾಯ್ ಬರೇಲಿಗಾಗಿ ಕೆಲಸ ಮಾಡಿದರೆ, ಪ್ರಧಾನಿ ಮೋದಿ ಅದಾನಿ, ಅಂಬಾನಿಗಾಗಿ ಕೆಲಸ- ರಾಹುಲ್
ಅದಾನಿ ಮತ್ತು ಅಂಬಾನಿ ಹಿತಾಸಕ್ತಿಯಲ್ಲಿ ಕೆಲಸ ಮಾಡುವ ಪ್ರಧಾನಿ ನರೇಂದ್ರ ಮೋದಿಯವರಂತೆ ತಮ್ಮ ಕುಟುಂಬ ಯಾವಾಗಲೂ ರಾಯ್ ಬರೇಲಿ ಲೋಕಸಭಾ ಕ್ಷೇತ್ರದ ಜನರಿಗಾಗಿ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.

ರಾಯ್ ಬರೇಲಿ: ಅದಾನಿ ಮತ್ತು ಅಂಬಾನಿ ಹಿತಾಸಕ್ತಿಯಲ್ಲಿ ಕೆಲಸ ಮಾಡುವ ಪ್ರಧಾನಿ ನರೇಂದ್ರ ಮೋದಿಯವರಂತೆ ತಮ್ಮ ಕುಟುಂಬ ಯಾವಾಗಲೂ ರಾಯ್ ಬರೇಲಿ ಲೋಕಸಭಾ ಕ್ಷೇತ್ರದ ಜನರಿಗಾಗಿ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.
ನಾಮಪತ್ರ ಸಲ್ಲಿಸಿದ ನಂತರ ಕ್ಷೇತ್ರದಲ್ಲಿ ಮೊದಲ ಬಾರಿಗೆ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ತಮ್ಮ ಕುಟುಂಬವು ಇಲ್ಲಿನ ಜನರೊಂದಿಗೆ ಆಳವಾದ ಸಂಪರ್ಕವನ್ನು ಹೊಂದಿರುವ ಕಾರಣ ರಾಯ್ ಬರೇಲಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವುದಾಗಿ ಮಹಾರಾಜ್‌ಗಂಜ್‌ನಲ್ಲಿ ಹೇಳಿದರು.
ಗುರುಬಕ್ಸ್‌ಗಂಜ್, ಲಾಲ್‌ಗಂಜ್ ಮತ್ತು ಕಿಶುಂದಾಸ್‌ಪುರದಲ್ಲಿ ಚುನಾವಣಾ ರ್‍ಯಾಲಿಗಳನ್ನುದ್ದೇಶಿಸಿ ಅವರು ಮಾತನಾಡಿದರು. ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, 2022- 25 ರಲ್ಲಿ ಉನ್ನತ ಕೈಗಾರಿಕೋದ್ಯಮಿಗಳ 24 ವರ್ಷಗಳ ಹಣಕ್ಕೆ ಸಮಾನವಾದ 16 ಲಕ್ಷ ಕೋಟಿ ರೂಪಾಯಿಗಳ ಸಾಲವನ್ನು ಮನ್ನಾ ಮಾಡಲಾಗಿದೆ ಎಂದು ಆರೋಪಿಸಿದರು.
ರಾಯ್ ಬರೇಲಿಯಲ್ಲಿ ತಮ್ಮ ಅಜ್ಜಿ ಇಂದಿರಾ ಗಾಂಧಿ, ಅವರ ತಂದೆ ರಾಜೀವ್ ಗಾಂಧಿ ಮತ್ತು ಅವರ ತಾಯಿ ಸೋನಿಯಾ ಗಾಂಧಿ ಜನರ ಜೀವನವನ್ನು ಸುಧಾರಿಸಲು ಶ್ರಮಿಸಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು. ಗಾಂಧಿ ಕುಟುಂಬದ ಭದ್ರಕೋಟೆ ಎಂದು ಪರಿಗಣಿಸಲ್ಪಟ್ಟಿರುವ ರಾಯ್ ಬರೇಲಿ ಕ್ಷೇತ್ರವನ್ನು 2004 ರಿಂದ ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರತಿನಿಧಿಸುತ್ತಿದ್ದರು. ಈ ಕ್ಷೇತ್ರವನ್ನು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕೂಡ ಪ್ರತಿನಿಧಿಸಿದ್ದರು.
ರೈತರು ಮತ್ತು ನಿರುದ್ಯೋಗಿ ಯುವಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಮಾಧ್ಯಮಗಳು ತೋರಿಸುತ್ತಿಲ್ಲ ಬದಲಿಗೆ ಉನ್ನತ ಕೈಗಾರಿಕೋದ್ಯಮಿಗಳ ಕುಟುಂಬಗಳಲ್ಲಿ ಮದುವೆ ಕಾರ್ಯಕ್ರಮಗಳಿಗೆ ಪ್ರಾಮುಖ್ಯತೆ ನೀಡುತ್ತಿವೆ ಎಂದು ಆರೋಪಿಸಿದ ರಾಹುಲ್ ಗಾಂಧಿ, ಲೋಕಸಭಾ ಚುನಾವಣೆಯಲ್ಲಿ ವಿಪಕ್ಷಗಳ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಬಡ ಕುಟುಂಬಗಳ ಪಟ್ಟಿಯನ್ನು ಸಂಗ್ರಹಿಸಿ ವಾರ್ಷಿಕವಾಗಿ 1 ಲಕ್ಷ ರೂ ಅಥವಾ ತಿಂಗಳಿಗೆ ರೂ. 8,500ಗಳನ್ನು ಪ್ರತಿ ಕುಟುಂಬದ ಓರ್ವ ಮಹಿಳಾ ಖಾತೆ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದರು.
ರಾಯ್ ಬರೇಲಿಯಲ್ಲಿ ಮೇ 20ರಂದು ಐದನೇ ಹಂತದ ಲೋಕಸಭೆ ಚುನಾವಣೆ ನಡೆಯಲಿದೆ. ಇಲ್ಲಿ ಉತ್ತರ ಪ್ರದೇಶದ ಸಚಿವ ದಿನೇಶ್ ಪ್ರತಾಪ್ ಸಿಂಗ್ ಅವರನ್ನು ರಾಹುಲ್ ಎದುರಾಳಿಯಾಗಿ ಬಿಜೆಪಿ ಕಣಕ್ಕಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



