ದೇಶ

ಅಬಕಾರಿ ನೀತಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಎಪಿಯನ್ನೇ ಆರೋಪಿಯನ್ನಾಗಿ ಮಾಡಲಾಗುವುದು- ದೆಹಲಿ ಹೈಕೋರ್ಟ್‌ಗೆ ಇಡಿ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂದಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷವನ್ನೇ(ಎಎಪಿ) ಆರೋಪಿಯನ್ನಾಗಿ ಮಾಡುವುದಾಗಿ ಜಾರಿ ನಿರ್ದೇಶನಾಲಯ(ಇಡಿ) ಮಂಗಳವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

ಅಬಕಾರಿ ನೀತಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಎಪಿಯನ್ನೇ ಆರೋಪಿಯನ್ನಾಗಿ ಮಾಡಲಾಗುವುದು- ದೆಹಲಿ ಹೈಕೋರ್ಟ್‌ಗೆ ಇಡಿ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂದಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷವನ್ನೇ(ಎಎಪಿ) ಆರೋಪಿಯನ್ನಾಗಿ ಮಾಡುವುದಾಗಿ ಜಾರಿ ನಿರ್ದೇಶನಾಲಯ(ಇಡಿ) ಮಂಗಳವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದು, ರಾಜಕೀಯ ಪಕ್ಷವೊಂದು ಪ್ರಕರಣದಲ್ಲಿ ಆರೋಪಿಯಾಗುತ್ತಿರುವುದು ಇದೇ ಮೊದಲು.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಗೆ ಇಡಿ ಇಂದು ವಿರೋಧ ವ್ಯಕ್ತಪಡಿಸಿದೆ.

"ಪ್ರಕರಣ ಸಂಬಂಧ ಸಲ್ಲಿಸಲಿರುವ ಮುಂದಿನ ಚಾರ್ಜ್ ಶೀಟ್ ನಲ್ಲಿ ಎಎಪಿಯನ್ನು ಸಹ-ಆರೋಪಿಯನ್ನಾಗಿ ಮಾಡಲಾಗುವುದು" ಎಂದು ಸಿಸೋಡಿಯಾ ಅವರ ಜಾಮೀನು ಅರ್ಜಿಯ ಕುರಿತು ವಾದ ಆಲಿಸುತ್ತಿರುವ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರಿಗೆ ಇಡಿ ವಕೀಲರು ತಿಳಿಸಿದರು.

ಪ್ರಕರಣದಲ್ಲಿ ಚಾರ್ಜ್ ಶೀಟ್ ದಾಖಲಿಸುವ ಪ್ರಕ್ರಿಯೆಯನ್ನು ವಿಳಂಬಗೊಳಿಸಲು ಆರೋಪಿಗಳು ಸಂಘಟಿತ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ತನಿಖಾ ಸಂಸ್ಥೆಯ ವಕೀಲರು ವಾದಿಸಿದರು.

ಅವರಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿರುವ ಸಿಸೋಡಿಯಾ ಪರ ವಕೀಲರು, ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣದಲ್ಲಿ ಇಡಿ ಮತ್ತು ಸಿಬಿಐ ಇನ್ನೂ ಹಲವು ಜನರನ್ನು ಬಂಧಿಸುತ್ತಿವೆ ಮತ್ತು ವಿಚಾರಣೆ ಶೀಘ್ರವಾಗಿ ಮುಗಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.