ಅಬಕಾರಿ ನೀತಿ ಪ್ರಕರಣ: ಕೆ ಕವಿತಾ ನ್ಯಾಯಾಂಗ ಬಂಧನ ಮೇ 20ರವರೆಗೆ ವಿಸ್ತರಣೆ
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಬಿಆರ್‌ಎಸ್ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 20ರವರೆಗೆ ವಿಸ್ತರಿಸಿದೆ.

ನವದೆಹಲಿ: ರದ್ದಾಗಿರುವ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ಮಂಗಳವಾರ ದೆಹಲಿ ನ್ಯಾಯಾಲಯ ಮೇ 20ರವರೆಗೆ ವಿಸ್ತರಿಸಿದೆ.
ಈ ಹಿಂದೆ ಪ್ರಕರಣದಲ್ಲಿ ನೀಡಲಾಗಿದ್ದ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ, ಇಡಿ ಇಂದು ಕವಿತಾ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿತು. ಆರೋಪಿಯ ವಿಚಾರಣೆ ನಡೆಸಿದ ಇಡಿ ಮತ್ತು ಸಿಬಿಐ ಪ್ರಕರಣಗಳ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಈ ಆದೇಶ ನೀಡಿದರು.
ಏತನ್ಮಧ್ಯೆ, ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಸಲ್ಲಿಸಿರುವ ಹೊಸ ಚಾರ್ಜ್ ಶೀಟ್ ಅನ್ನು ಪರಿಗಣಿಸಬೇಕೆ ಎಂಬ ಆದೇಶವನ್ನು ನ್ಯಾಯಾಧೀಶವರು, ಮೇ 20ಕ್ಕೆ ಕಾಯ್ದಿರಿಸಿದ್ದಾರೆ.
ಇಂದು ನಡೆದ ವಿಚಾರಣೆಯ ವೇಳೆ, ಕವಿತಾ ಅವರನ್ನು ವಿಚಾರಣೆಗೆ ಒಳಪಡಿಸಲು ಪ್ರಾಸಿಕ್ಯೂಷನ್ ದೂರಿನಲ್ಲಿ ಇಡಿ ಚಾರ್ಜ್ ಶೀಟ್‌ಗೆ ಸಮಾನವಾದ ಸಾಕಷ್ಟು ಪುರಾವೆಗಳಿವೆ ಎಂದು ಕೇಂದ್ರ ತನಿಖಾ ಸಂಸ್ಥೆ ನ್ಯಾಯಾಧೀಶರಿಗೆ ತಿಳಿಸಿದೆ.
ಸದ್ಯ ರದ್ದಾಗಿರುವ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 46 ವರ್ಷದ ಬಿಆರ್‌ಎಸ್ ನಾಯಕಿ ಕವಿತಾ ಅವರನ್ನು ಮಾರ್ಚ್ 15ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನಿವಾಸದಲ್ಲಿ ಇಡಿ ಅಧಿಕಾರಿಗಳು ಬಂಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



