ದೇಶ

ತಪ್ಪುದಾರಿಗೆಳೆಯುವ ಜಾಹೀರಾತು: ಬಾಬಾ ರಾಮ್‌ದೇವ್ ವಿರುದ್ಧ ನ್ಯಾಯಾಂಗ ನಿಂದನೆ ನೊಟೀಸ್ ಮೇಲಿನ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಜನರ ದಾರಿತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಯೋಗ ಗುರು ರಾಮ್‌ದೇವ್‌, ಅವರ ಸಹಾಯಕ ಬಾಲಕೃಷ್ಣ ಮತ್ತು ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ನೀಡಿರುವ ನ್ಯಾಯಾಂಗ ನಿಂದನೆ ನೋಟಿಸ್ ಗೆ ಸಂಬಂಧಪಟ್ಟ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಕಾಯ್ದಿರಿಸಿದೆ.

ತಪ್ಪುದಾರಿಗೆಳೆಯುವ ಜಾಹೀರಾತು: ಬಾಬಾ ರಾಮ್‌ದೇವ್ ವಿರುದ್ಧ ನ್ಯಾಯಾಂಗ ನಿಂದನೆ ನೊಟೀಸ್ ಮೇಲಿನ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ಬಾಬಾ ರಾಮ್ ದೇವ್
Published On :

ನವದೆಹಲಿ: ಜನರನ್ನು ದಾರಿತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಯೋಗ ಗುರು ರಾಮ್‌ದೇವ್‌, ಅವರ ಸಹಾಯಕ ಬಾಲಕೃಷ್ಣ ಮತ್ತು ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ವಿರುದ್ಧ ನ್ಯಾಯಾಂಗ ನಿಂದನೆ ನೋಟಿಸ್ ಗೆ ಸಂಬಂಧಪಟ್ಟ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಕಾಯ್ದಿರಿಸಿದೆ.

ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರನ್ನೊಳಗೊಂಡ ನ್ಯಾಯಪೀಠವು ಪತಂಜಲಿಯ ಉತ್ಪನ್ನಗಳ ಪರವಾನಗಿಯನ್ನು ಅಮಾನತುಗೊಳಿಸಿರುವ ಜಾಹೀರಾತುಗಳನ್ನು ಹಿಂಪಡೆಯಲು ತೆಗೆದುಕೊಳ್ಳುತ್ತಿರುವ ಕ್ರಮಗಳನ್ನು ಸೂಚಿಸುವ ಅಫಿಡವಿಟ್ ಸಲ್ಲಿಸಲು ಸಂಸ್ಥೆಯ ಪರ ವಕೀಲರು ಸಮಯ ಕೋರಿದ್ದನ್ನು ಪರಿಗಣನೆಗೆ ತೆಗೆದುಕೊಂಡಿದ್ದಾರೆ.

ಮೂರು ವಾರಗಳಲ್ಲಿ ಅಫಿಡವಿಟ್ ಸಲ್ಲಿಸಬೇಕು ಎಂದು ನ್ಯಾಯಪೀಠ ಈ ಸಂದರ್ಭದಲ್ಲಿ ಹೇಳಿತು. ಪ್ರತಿವಾದಿಗಳು 5 ರಿಂದ 7 ರವರೆಗೆ (ಪತಂಜಲಿ ಆಯುರ್ವೇದ ಲಿಮಿಟೆಡ್, ಬಾಲಕೃಷ್ಣ ಮತ್ತು ರಾಮ್‌ದೇವ್) ನೀಡಲಾದ ನಿಂದನೆ ನೋಟಿಸ್‌ನಲ್ಲಿ ಆದೇಶಗಳನ್ನು ಕಾಯ್ದಿರಿಸಲಾಗಿದೆ ಎಂದು ನ್ಯಾಯಪೀಠ ಹೇಳಿದೆ.

ಪತಂಜಲಿ ಆಯುರ್ವೇದ ಲಿಮಿಟೆಡ್ ಮತ್ತು ದಿವ್ಯ ಫಾರ್ಮಸಿಯ 14 ಉತ್ಪನ್ನಗಳ ಪರವಾನಗಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಉತ್ತರಾಖಂಡ ರಾಜ್ಯ ಪರವಾನಗಿ ಪ್ರಾಧಿಕಾರ (SLA) ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.

ಕೋವಿಡ್ ವ್ಯಾಕ್ಸಿನೇಷನ್ ಅಭಿಯಾನ ಮತ್ತು ಆಧುನಿಕ ವೈದ್ಯಕೀಯ ವ್ಯವಸ್ಥೆಗಳ ವಿರುದ್ಧ ಪತಂಜಲಿ ನಡೆಸಿದ ಅಭಿಯಾನವನ್ನು ಆರೋಪಿಸಿ ಐಎಂಎ 2022 ರಲ್ಲಿ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಅಸ್ತಮಾ ಸೇರಿದಂತೆ ಕೆಲವು ಕಾಯಿಲೆಗಳನ್ನು ಗುಣಪಡಿಸುತ್ತದೆ ಎಂದು ಹೇಳುವ ಪತಂಜಲಿ ಆಯುರ್ವೇದದ ಜಾಹೀರಾತು ಸಂಪೂರ್ಣವಾಗಿ ಸುಳ್ಳಾಗಿದ್ದು ಜನರನ್ನು ತಪ್ಪುದಾರಿಗೆಳೆಯುತ್ತದೆ ಎಂದು ಐಎಂಎ ತನ್ನ ಅರ್ಜಿಯಲ್ಲಿ ಆರೋಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.