ದೇಶ

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಎರಡು ವಾಹನಗಳ ನಡುವೆ ಡಿಕ್ಕಿ, 6 ಮಂದಿ ದುರ್ಮರಣ

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ವಾಹನಗಳ ನಡುವೆ ಡಿಕ್ಕಿ ಸಂಭವಿಸಿ 6 ಮಂದಿ ಸಾವನ್ನಪ್ಪಿರುವ ಘಟನೆ ಮಗಳವಾರ ನಡೆದಿದೆ.

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಎರಡು ವಾಹನಗಳ ನಡುವೆ ಡಿಕ್ಕಿ, 6 ಮಂದಿ ದುರ್ಮರಣ
ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಕಾರು.
Published On :

ಲಖನೌ: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ವಾಹನಗಳ ನಡುವೆ ಡಿಕ್ಕಿ ಸಂಭವಿಸಿ 6 ಮಂದಿ ಸಾವನ್ನಪ್ಪಿರುವ ಘಟನೆ ಮಗಳವಾರ ನಡೆದಿದೆ.

ಸೋಮವಾರ ರಾತ್ರಿ 12 ಗಂಟೆ ಸುಮಾರಿಗೆ ಹಾಪುರದಿಂದ ಮೊರಾದಾಬಾದ್ ಕಡೆಗೆ ಕಾರು ವೇಗವಾಗಿ ಹೋಗುತ್ತಿತ್ತು. ಕೊತ್ವಾಲಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿ-9 ರಲ್ಲಿರುವ ಅಲ್ಲಾಬಕ್ಷ್‌ಪುರ ಗ್ರಾಮವನ್ನು ತಲುಪಿದಾಗ, ಚಾಲಕನ ನಿಯಂತ್ರಣ ತಪ್ಪಿ ಕಾರು ಹೆದ್ದಾರಿಯಲ್ಲಿನ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಇನ್ನೊಂದು ಕಡೆಯಿಂದ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾ ಕಾರು ಪಲ್ಟಿ ಹೊಡೆದಿದೆ.

ಅಪಘಾತ ಎಷ್ಟು ತೀವ್ರವಾಗಿತ್ತು ಎಂದರೆ ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ವಾಹನಗಳು ಡಿಕ್ಕಿ ಹೊಡೆದ ಸದ್ದು ಕೇಳಿದ ಗ್ರಾಮಸ್ಥರು ಎಚ್ಚೆತ್ತುಕೊಂಡಿದ್ದು, ಕೂಡಲೇ ಸ್ಥಳಕ್ಕೆ ಆಗಮಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಗ್ರಾಮಸ್ಥರು ಕಾರಿನಲ್ಲಿ ಸಿಲುಕಿದ್ದವರನ್ನು ಹೊರ ತೆಗೆಯಲು ಯತ್ನಿಸಿದರಾದರೂ ಕಾರಿನಲ್ಲಿ ಸಿಲುಕಿದ್ದವರು ಬಹಳ ಹೊತ್ತಾದರೂ ಹೊರತೆಗೆಯಲು ಸಾಧ್ಯವಾಗಲಿಲ್ಲ.

ನಂತರ ಗ್ರಾಮಸ್ಥರ ನೆರವಿನಿಂದ ಪೊಲೀಸರು ಕಾರನ್ನು ಕಟ್ ಮಾಡಿ ಗಾಯಾಳುಗಳನ್ನು ಹೊರತೆಗೆದಿದ್ದಾರೆ. ತಕ್ಷಣ ಆಂಬ್ಯುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಷ್ಟೊತ್ತಿಗಾಗಲ ಆರು ಮಂದಿ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.