ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನ ನಾಶ, ಮೀಸಲಾತಿ ರದ್ದುಗೊಳಿಸುತ್ತದೆ: ರಾಹುಲ್ ಗಾಂಧಿ
ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು "ನಾಶಪಡಿಸಲಿದೆ" ಮತ್ತು ಆದಿವಾಸಿಗಳು, ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ಒದಗಿಸಲಾದ ಮೀಸಲಾತಿಯನ್ನು ರದ್ದುಗೊಳಿಸಲು ಬಯಸಿದೆ.

ಬೋಲಂಗಿರ್: ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು "ನಾಶಪಡಿಸಲಿದೆ" ಮತ್ತು ಆದಿವಾಸಿಗಳು, ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ಒದಗಿಸಲಾದ ಮೀಸಲಾತಿಯನ್ನು ರದ್ದುಗೊಳಿಸಲು ಬಯಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಆರೋಪಿಸಿದ್ದಾರೆ.
ಇಂದು ಒಡಿಶಾದ ಬೋಲಂಗಿರ್‌ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಈ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಅದು ಸಾರ್ವಜನಿಕ ವಲಯವನ್ನು ಖಾಸಗೀಕರಣಗೊಳಿಸುತ್ತದೆ ಮತ್ತು ದೇಶವನ್ನು 22 ಬಿಲಿಯನೇರ್‌ಗಳು ಮುನ್ನಡೆಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.
"ಬಿಜೆಪಿ ಈ ಪುಸ್ತಕವನ್ನು ಹರಿದು ಹಾಕಲು ಬಯಸುತ್ತಿದೆ. ಆದರೆ ನಾವು ಕಾಂಗ್ರೆಸ್ ಮತ್ತು ಭಾರತದ ಜನರು ಇದಕ್ಕೆ ಅವಕಾಶ ನೀಡುವುದಿಲ್ಲ" ಎಂದು ರಾಹುಲ್ ಗಾಂಧಿ ತಮ್ಮ ಕೈಯಲ್ಲಿರುವ ಸಂವಿಧಾನವನ್ನು ತೋರಿಸಿದರು.
“ಬಿಜೆಪಿ ಗೆದ್ದರೆ ಮೀಸಲಾತಿಯನ್ನು ರದ್ದುಪಡಿಸಲಾಗುತ್ತದೆ, ಸಾರ್ವಜನಿಕ ವಲಯವನ್ನು ಖಾಸಗೀಕರಣಗೊಳಿಸಲಾಗುತ್ತದೆ ಮತ್ತು ದೇಶವನ್ನು 22 ಕೋಟ್ಯಾಧಿಪತಿಗಳು ಮುನ್ನಡೆಸುತ್ತಾರೆ. ಹೀಗಾಗಿ ಜನಪರ ಸರ್ಕಾರ ರಚನೆಯಾಗಬೇಕು’’ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



