PM ಮೋದಿ ಸೋನಿಯಾ ಗಾಂಧಿಯಂತೆ ಹಿಂದಿ ಗೊತ್ತಿಲ್ಲದ ಇಟಾಲಿಯನ್ ಅಲ್ಲ; ದೇಶದ ಪ್ರಗತಿಗಾಗಿ ಶ್ರಮಿಸುತ್ತಿರುವ ಮಣ್ಣಿನ ಮಗ!
ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯಂತೆ ಹಿಂದಿ ಗೊತ್ತಿಲ್ಲದ ಇಟಾಲಿಯನ್ ಅಲ್ಲ, ಅವರು ದೇಶದ ಪ್ರಗತಿಗಾಗಿ ಶ್ರಮಿಸುತ್ತಿರುವ ಮಣ್ಣಿನ ಮಗ ಎಂದು ಹಿಮಾಚಲದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಟಿ ಕಂಗನಾ ರನೌತ್ ಹೇಳಿದ್ದಾರೆ.

ಶಿಮ್ಲಾ: ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯಂತೆ ಹಿಂದಿ ಗೊತ್ತಿಲ್ಲದ ಇಟಾಲಿಯನ್ ಅಲ್ಲ, ಅವರು ದೇಶದ ಪ್ರಗತಿಗಾಗಿ ಶ್ರಮಿಸುತ್ತಿರುವ ಮಣ್ಣಿನ ಮಗ ಎಂದು ಹಿಮಾಚಲದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಟಿ ಕಂಗನಾ ರನೌತ್ ಹೇಳಿದ್ದಾರೆ.
ಕುಲು ಜಿಲ್ಲೆಯ ಜಗತ್ ಖಾನಾದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೋದಿಯವರು ಉತ್ತಮ ಆಡಳಿತದ ಪ್ರತೀಕ. ಪ್ರಧಾನಿಗೆ ಪಹಾರಿ ಸೇರಿದಂತೆ ಹಲವಾರು ಭಾಷೆಗಳು ತಿಳಿದಿವೆ. ಸೋನಿಯಾ ಗಾಂಧಿಯಂತೆ ಹಿಂದಿ ಗೊತ್ತಿಲ್ಲದ ಪ್ರಧಾನಿ ಮೋದಿ ಇಟಲಿಯವರಲ್ಲ. ಅವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.
ಒಂದೆಡೆ ಮೋದಿಯವರ ಉತ್ತಮ ಆಡಳಿತವಿದ್ದರೆ ಮತ್ತೊಂದೆಡೆ ಕಾಂಗ್ರೆಸ್ನ ಭ್ರಷ್ಟಾಚಾರವಿದೆ. ಹೀಗಾಗಿ ಹಿಮಾಚಲ ಪ್ರದೇಶದ ಜನರು ಜೂನ್ 1ರ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಮನಸ್ಸು ಮಾಡಿದ್ದಾರೆ ಎಂದು ತಿಳಿಸಿದರು.
ಇದೇ ವೇಳೆ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಜೈ ರಾಮ್ ಠಾಕೂರ್ ಅವರು ಫ್ಲಾಪ್ ಚಿತ್ರ ಮಾಡುತ್ತಿದ್ದಾರೆ ಎಂಬ ಹೇಳಿಕೆಗಾಗಿ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರನ್ನು ತರಾಟೆಗೆ ತೆಗೆದುಕೊಂಡ ರಣಾವತ್, ಠಾಕೂರ್ ಅವರು ಐದು ವರ್ಷ ಮುಖ್ಯಮಂತ್ರಿಯಾಗಿ ಸೂಪರ್ ಹಿಟ್ ಅಧಿಕಾರವನ್ನು ಹೊಂದಿದ್ದರು. ಆದರೆ ಸುಖು ಅವರು ಕೇವಲ 15 ತಿಂಗಳುಗಳಲ್ಲಿ ತಮ್ಮ ಕೆಲಸದಲ್ಲಿ ವಿಫಲರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



