'ಅಟಲ್ ಸೇತುವೆ... ಜನರ ಜೊತೆ ಹೃದಯವನ್ನು ಸಂಪರ್ಕಿಸುತ್ತದೆ' ಎಂದ ನಟಿ ರಶ್ಮಿಕಾ: 'ಇದಕ್ಕಿಂತ ತೃಪ್ತಿಕರ ವಿಷಯ ಬೇರೆ ಇಲ್ಲ' ಎಂದ ಪ್ರಧಾನಿ ಮೋದಿ
ಈ ವಿಡಿಯೋವನ್ನು ರಶ್ಮಿಕಾ ಮಂದಣ್ಣ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ‘ದಕ್ಷಿಣ ಭಾರತದಿಂದ ಉತ್ತರ ಭಾರತದವರೆಗೆ, ಪೂರ್ವ ಭಾರತದಿಂದ ಪಶ್ಚಿಮ ಭಾರತದವರೆಗೆ ಜನರನ್ನು ಹಾಗೂ ಹೃದಯಗಳನ್ನು ಕನೆಕ್ಟ್ ಮಾಡುತ್ತಿದ್ದೇವೆ’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ನವದೆಹಲಿ: ಕನ್ನಡ ಮೂಲದ ನಟಿ ರಶ್ಮಿಕಾ ಮಂದಣ್ಣ ಮತ್ತೆ ಸುದ್ದಿಯಲ್ಲಿದ್ದಾರೆ. ಕೇಂದ್ರ ಸರ್ಕಾರದ ಅಟಲ್ ಸೇತು ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿ ಅವರು ಮಾತನಾಡಿರುವ ವಿಡಿಯೊ ವ್ಯಾಪಕವಾಗಿ ವೈರಲ್ ಆಗಿದ್ದು, ಈ ಟ್ವೀಟ್ನ ಪ್ರಧಾನಿ ನರೇಂದ್ರ ಮೋದಿ ಅವರು ರೀಟ್ವೀಟ್ ಮಾಡಿದ್ದಾರೆ.
ಭಾರತದ ಅತ್ಯಂತ ಉದ್ದನೆಯ ಸಮುದ್ರ ಸೇತುವೆ ಎನ್ನುವ ಖ್ಯಾತಿ ಅಟಲ್ ಸೇತುವೆಗೆ ಇದೆ. ಮುಂಬೈ ಹಾಗೂ ನವಿ ಮುಂಬೈ ಸಂಪರ್ಕಿಸುತ್ತದೆ. ಈ ಬಗ್ಗೆ ರಶ್ಮಿಕಾ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಈ ಬಗ್ಗೆ ಮಾತನಾಡಿರುವ ರಶ್ಮಿಕಾ, ‘ಭಾರತದ ಅತಿ ಉದ್ದನೆಯ ಸಮುದ್ರ ಬ್ರಿಜ್. 22 ಕಿಲೋಮೀಟರ್ ಉದ್ದ ಇದೆ. ಎರಡು ಗಂಟೆಗಳ ಪ್ರಯಾಣ ಈಗ 20 ನಿಮಿಷಗಳಲ್ಲಿ ಮುಗಿಯುತ್ತದೆ. ನಂಬಲೂ ಅಸಾಧ್ಯ. ಕೆಲ ವರ್ಷಗಳ ಹಿಂದೆ ಯಾರೂ ಇದನ್ನು ಊಹಿಸಿಯೂ ಇರಲಿಲ್ಲ’ ಎಂದು ಹೇಳಿದ್ದಾರೆ.
ಭಾರತ ದೊಡ್ಡದಾಗಿ ಕನಸು ಕಾಣಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದರು. ಆದರೆ, ಏಳೇ ವರ್ಷಗಳಲ್ಲಿ ಈ ದೊಡ್ಡ ಬ್ರಿಡ್ಜ್ ನಿರ್ಮಾಣ ಮಾಡಿದ್ದೇವೆ. ಅಟಲ್ ಸೇತು ಇದು ಕೇವಲ ಸೇತುವೆ ಅಲ್ಲ, ಯುವ ಭಾರತಕ್ಕೆ ಇದು ಗ್ಯಾರಂಟಿ. ಈ ರೀತಿಯ ನೂರು ಅಟಲ್ ಸೇತುವೆ ಸ್ಥಾಪಿಸಬೇಕು ಎಂದರೆ ಅಭಿವೃದ್ಧಿಗೆ ಮತ ಹಾಕಿ’ ಎಂದು ರಶ್ಮಿಕಾ ಹೇಳಿರುವ ವಿಡಿಯೊಕ್ಕೆ ಹಲವರು ಪ್ರಶಂಸೆ ವ್ಯಕ್ತಪಡಿಸಿದರೆ ಇನ್ನು ಕೆಲವರು ಇದು ಬಿಜೆಪಿಯಿಂದ ಹಣ ಪಡೆದುಕೊಂಡು ಮಾಡಿರುವ ಪ್ರಚಾರದ ವಿಡಿಯೊ ಎಂದು ಟೀಕೆ ಮಾಡುತ್ತಿದ್ದಾರೆ.

ಬೂಟ್ ನೆಕ್ಕುವುದನ್ನು ನಿಲ್ಲಿಸಿ, ಮೆಗಾಸ್ಟಾರ್ ಆಗಲು ಇದು ನಿಮಗೆ ಸಹಾಯ ಮಾಡಲ್ಲ: ರಶ್ಮಿಕಾಗೆ ಅಂಜಲಿ ತಿರುಗೇಟು
ಈ ವಿಡಿಯೋವನ್ನು ರಶ್ಮಿಕಾ ಮಂದಣ್ಣ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ‘ದಕ್ಷಿಣ ಭಾರತದಿಂದ ಉತ್ತರ ಭಾರತದವರೆಗೆ, ಪೂರ್ವ ಭಾರತದಿಂದ ಪಶ್ಚಿಮ ಭಾರತದವರೆಗೆ ಜನರನ್ನು ಹಾಗೂ ಹೃದಯಗಳನ್ನು ಕನೆಕ್ಟ್ ಮಾಡುತ್ತಿದ್ದೇವೆ’ ಎಂದು ಕ್ಯಾಪ್ಶನ್ ನೀಡಿದ್ದಾರೆ. ಇದನ್ನು ರೀಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ‘ಜನರನ್ನು ಸಂಪರ್ಕಿಸುವುದು ಮತ್ತು ಜೀವನವನ್ನು ಸುಧಾರಿಸುವುದಕ್ಕಿಂತ ಹೆಚ್ಚು ತೃಪ್ತಿಕರವಾದುದ್ದು ಬೇರೆನೂ ಇಲ್ಲ’ ಎಂದು ಬರೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


