ದೇಶ

ಜಮ್ಮು-ಕಾಶ್ಮೀರದಲ್ಲಿ ಎರಡು ಪ್ರತ್ಯೇಕ ಭಯೋತ್ಪಾದಕ ದಾಳಿ: ಬಿಜೆಪಿ ಮಾಜಿ ಸರಪಂಚ್ ಸಾವು, ಜೈಪುರ ಮೂಲದ ದಂಪತಿ ಗಾಯ

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಬಿಜೆಪಿಯ ಮಾಜಿ ಸರ್ ಪಂಚ್ ರ ಹತ್ಯೆಯಾಗಿದೆ.

ಜಮ್ಮು-ಕಾಶ್ಮೀರದಲ್ಲಿ ಎರಡು ಪ್ರತ್ಯೇಕ ಭಯೋತ್ಪಾದಕ ದಾಳಿ: ಬಿಜೆಪಿ ಮಾಜಿ ಸರಪಂಚ್ ಸಾವು, ಜೈಪುರ ಮೂಲದ ದಂಪತಿ ಗಾಯ
ಸಾಂದರ್ಭಿಕ ಚಿತ್ರ
Published On :

ಅನಂತನಾಗ್: ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಬಿಜೆಪಿಯ ಮಾಜಿ ಸರ್ ಪಂಚ್ ರ ಹತ್ಯೆಯಾಗಿದೆ. ಜೈಪುರ ಮೂಲದ ದಂಪತಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಬಿಜೆಪಿಯ ಮಾಜಿ ಸರಪಂಚ್ ನನ್ನು ಐಜಾಜ್ ಅಹ್ಮದ್ ಎಂದು ಗುರುತಿಸಲಾಗಿದೆ. ಶೋಪಿಯಾನ್ ಜಿಲ್ಲೆಯ ಹೀರ್ಪೋರಾದಲ್ಲಿ ಐಜಾಜ್ ಅಹ್ಮದ್ ಶೇಖ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಭದ್ರತಾ ಪಡೆ ಪೊಲೀಸರು ಪ್ರದೇಶವನ್ನು ಸುತ್ತುವರಿದು ತೀವ್ರ ಗಾಯಗೊಂಡ ಐಜಾಜ್ ಅಹ್ಮದ್ ನನ್ನು ಆಸ್ಪತ್ರೆಗೆ ಕರೆದೊಯ್ದರೂ ಬದುಕುಳಿಯಲಿಲ್ಲ ಎಂದು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರದ ಶೋಪಿಯಾನ್‌ನ ಹೀರ್‌ಪೋರಾದಲ್ಲಿ ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಬಿಜೆಪಿ ನಾಯಕ ಮತ್ತು ಮಾಜಿ ಸರಪಂಚ್ ಐಜಾಜ್ ಅಹ್ಮದ್ ಶೇಖ್ ಅವರು ತೀವ್ರ ಗಾಯಗೊಂಡಿದ್ದರು ಎಂದು ಕಾಶ್ಮೀರ ಐಜಿಪಿ ಹೇಳಿದ್ದಾರೆ.

ಮತ್ತೊಂದು ಘಟನೆಯಲ್ಲಿ, ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಯನ್ನಾರ್ ಪ್ರದೇಶದಲ್ಲಿ ಜೈಪುರದ ದಂಪತಿ ಗಾಯಗೊಂಡಿದ್ದಾರೆ.

ಅನಂತ್‌ನಾಗ್‌ ಜಿಲ್ಲೆಯ ಯನ್ನಾರ್‌ನಲ್ಲಿ ಜೈಪುರ ನಿವಾಸಿ ಫರ್ಹಾ ಎಂಬ ಮಹಿಳೆ ಮತ್ತು ಆಕೆಯ ಸಂಗಾತಿ ತಬ್ರೇಜ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಗಾಯಗೊಳಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರರ ದಾಳಿಯನ್ನು ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಖಂಡಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.