ಇವಿಎಂ ಹಾನಿ: ಜೆಡಿಎಸ್ ನಾಯಕನ ವಿರುದ್ಧದ ಪ್ರಕರಣ ರದ್ದತಿ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ಕರ್ನಾಟಕ ಸರ್ಕಾರ
ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಉದ್ರಿಕ್ತ ಗುಂಪೊಂದರಲ್ಲಿ ತೊಡಗಿಸಿಕೊಂಡು ವಿದ್ಯುನ್ಮಾನ ಮತಯಂತ್ರಗಳಿಗೆ (ಇವಿಎಂ) ಹಾನಿ ಮಾಡಿದ್ದಕ್ಕಾಗಿ ತಮ್ಮ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಕರ್ನಾಟಕ ಸರಕಾರ ಸಲ್ಲಿಸಿರುವ ಮೇಲ್ಮನವಿಗೆ ಉತ್ತರಿಸುವಂತೆ ಮಾಜಿ ಪೊಲೀಸ್ ಅಧಿಕಾರಿಯೂ ಆಗಿರುವ ಜೆಡಿ(ಎಸ್) ನಾಯಕ ಬಿಬಿ ಪಾಟೀಲ್ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ನವದೆಹಲಿ: ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಉದ್ರಿಕ್ತ ಗುಂಪೊಂದರಲ್ಲಿ ತೊಡಗಿಸಿಕೊಂಡು ವಿದ್ಯುನ್ಮಾನ ಮತಯಂತ್ರಗಳಿಗೆ (ಇವಿಎಂ) ಹಾನಿ ಮಾಡಿದ್ದಕ್ಕಾಗಿ ತಮ್ಮ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಕರ್ನಾಟಕ ಸರಕಾರ ಸಲ್ಲಿಸಿರುವ ಮೇಲ್ಮನವಿಗೆ ಉತ್ತರಿಸುವಂತೆ ಮಾಜಿ ಪೊಲೀಸ್ ಅಧಿಕಾರಿಯೂ ಆಗಿರುವ ಜೆಡಿ(ಎಸ್) ನಾಯಕ ಬಿಬಿ ಪಾಟೀಲ್ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ಉನ್ನತ ನ್ಯಾಯಾಲಯದ ದ್ವಿಸದಸ್ಯ ಪೀಠವು ಪಾಟೀಲ್ ಅವರಿಗೆ ನೋಟಿಸ್ ಜಾರಿ ಮಾಡಿದೆ ಮತ್ತು ಕರ್ನಾಟಕ ಸರ್ಕಾರದ ಮೇಲ್ಮನವಿಯಲ್ಲಿ ಅವರ ಪ್ರತಿಕ್ರಿಯೆಯನ್ನು ಕೇಳಿದೆ. ಬೇಸಿಗೆ ರಜೆಯ ನಂತರ ಜುಲೈ 7 ರಂದು ಸುಪ್ರೀಂ ಕೋರ್ಟ್ ಈಗ ಪ್ರಕರಣದ ವಿಚಾರಣೆ ನಡೆಸಲಿದೆ.
ಕಳೆದ ವರ್ಷ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಇವಿಎಂಗಳನ್ನು ಹಾನಿಗೊಳಿಸಿದ ಆರೋಪದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರಿದ ನಿವೃತ್ತ ಪೊಲೀಸ್ ಅಧಿಕಾರಿ ಪಾಟೀಲ್ ಆರೋಪಿಯಾಗಿರುವುದು ಇಲ್ಲಿ ಗಮನಿಸಬೇಕಾದ ಸಂಗತಿಯಾಗಿದೆ. ಆರಂಭದಲ್ಲಿ ಜುಲೈ 2023 ರಲ್ಲಿ ಕರ್ನಾಟಕ ಹೈಕೋರ್ಟ್ನ ಕಲಬುರಗಿ ಪೀಠ ಪಾಟೀಲ್ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ಮತ್ತು ದೂರನ್ನು ರದ್ದುಗೊಳಿಸಿ, ಪ್ರಕರಣದಲ್ಲಿ ರಿಲೀಫ್ ನೀಡಿತ್ತು. ಆದರೆ ತರುವಾಯ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು. ಹೈಕೋರ್ಟ್ ತಪ್ಪಾಗಿ ಪ್ರಕರಣ ರದ್ದುಗೊಳಿಸಿದೆ ಎಂದು ಮೇಲ್ಮನವಿಯಲ್ಲಿ ಹೇಳಿತ್ತು.
ಪಾಟೀಲ್ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿವೆ. ಚುನಾವಣಾ ಕರ್ತವ್ಯದಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ಮತ್ತು ನಿಂದನೆ ಮಾಡಿದ ಗುಂಪಿನ ಭಾಗವೆಂದು ತೋರಿಸುವ ವೀಡಿಯೊ ರೆಕಾರ್ಡಿಂಗ್ ಮತ್ತು ಛಾಯಾಚಿತ್ರಗಳ ರೂಪದಲ್ಲಿ ದಾಖಲೆಯಲ್ಲಿ ಇರಿಸಲಾಗಿದೆ. ಇವಿಎಂ ಯಂತ್ರಗಳನ್ನು ಹಾನಿಗೊಳಿಸಲಾಗಿದೆ ಎಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಮೇಲ್ಮನವಿಯಲ್ಲಿ ತಿಳಿಸಿದೆ. ಕಳೆದ ವರ್ಷ ವಿಧಾನಸಭಾ ಚುನಾವಣೆಯ ವೇಳೆ ಚುನಾವಣಾಧಿಕಾರಿಗಳ ಮೇಲೆ ದಾಳಿ ಮಾಡಿ ವಾಹನಗಳಿಗೆ ಹಾನಿ ಮಾಡಿ ಇವಿಎಂ ಸೇರಿದಂತೆ ಚುನಾವಣಾ ಸಾಮಗ್ರಿಗಳನ್ನು ಧ್ವಂಸಗೊಳಿಸುವಲ್ಲಿ ಆರೋಪಿ ಸಕ್ರಿಯ ಪಾತ್ರ ವಹಿಸಿದ್ದಾರೆ ಮತ್ತು ನೇತೃತ್ವ ವಹಿಸಿದ್ದಾರೆ ಎಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ಗೆ ಬಲವಾಗಿ ಸ್ಪಷ್ಟಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



