5ನೇ ಹಂತದ ಲೋಕಸಭಾ ಚುನಾವಣೆ: ರಾಯ್ ಬರೇಲಿ, ಅಮೇಥಿಯಲ್ಲಿ ನಾಳೆ ಮತದಾನ
ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಸೋಮವಾರ ಮತದಾನ ನಡೆಯಲಿದ್ದು, ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಸ್ಮೃತಿ ಇರಾನಿ, ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತಿತರರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

ನವದೆಹಲಿ: ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಸೋಮವಾರ ಮತದಾನ ನಡೆಯಲಿದ್ದು, ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಸ್ಮೃತಿ ಇರಾನಿ, ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತಿತರರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.
4.26 ಕೋಟಿ ಮಹಿಳೆಯರು ಮತ್ತು 5,409 ತೃತೀಯಲಿಂಗಿ ಮತದಾರರು ಸೇರಿದಂತೆ 8.95 ಕೋಟಿಗೂ ಹೆಚ್ಚು ಜನರು ಈ ಸುತ್ತಿನಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದಾರೆ. 94,732 ಮತಗಟ್ಟೆಗಳಲ್ಲಿ 9.47 ಲಕ್ಷ ಮತಗಟ್ಟೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
ಮಹಾರಾಷ್ಟ್ರದಲ್ಲಿ 13, ಉತ್ತರ ಪ್ರದೇಶದಲ್ಲಿ 14, ಪಶ್ಚಿಮ ಬಂಗಾಳದಲ್ಲಿ 7, ಬಿಹಾರದಲ್ಲಿ 5, ಜಾರ್ಖಂಡ್‌ನಲ್ಲಿ 3, ಒಡಿಶಾದಲ್ಲಿ 5, ಜಮ್ಮು-ಕಾಶ್ಮೀರದಲ್ಲಿ ಒಂದು ಮತ್ತು ಲಡಾಖ್‌ನಲ್ಲಿ ಏಕೈಕ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಏಳು ಹಂತದ ಚುನಾವಣೆಗಳಲ್ಲಿ ಈ ಸುತ್ತಿನಲ್ಲಿ ಕನಿಷ್ಠ ಸಂಖ್ಯೆಯ 49 ಸ್ಥಾನಗಳನ್ನು ಒಳಗೊಂಡಿದೆ. ಬಿಜೆಪಿಗೆ ಇದು ಮತ್ತೊಂದು ಪ್ರಮುಖ ಹಂತವಾಗಿದೆ. ಏಕೆಂದರೆ ಇವುಗಳಲ್ಲಿ 40 ಕ್ಕೂ ಹೆಚ್ಚು ಸ್ಥಾನಗಳು ಎನ್ ಡಿಎ ಮೈತ್ರಿಕೂಟದೊಂದಿಗೆ ಇದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



