ದೇಶ

ಶ್ರೀಲಂಕಾದಿಂದ ಬಂದ ನಾಲ್ವರು ಇಸ್ಲಾಮಿಕ್ ಸ್ಟೇಟ್ ಉಗ್ರರನ್ನು ಬಂಧಿಸಿದ ಗುಜರಾತ್ ಎಟಿಎಸ್

ಅಹಮದಾಬಾದ್‌ನ ಸರ್ದಾರ್ ವಲ್ಲಭಾಯಿ ಪಟೇಲ್ ವಿಮಾನ ನಿಲ್ದಾಣದಲ್ಲಿ ಇಸ್ಲಾಮಿಕ್ ಸ್ಟೇಟ್‌ನ ನಾಲ್ವರು ಭಯೋತ್ಪಾದಕರನ್ನು ಬಂಧಿಸಿರುವುದಾಗಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಸೋಮವಾರ ತಿಳಿಸಿದೆ. ಎಟಿಎಸ್ ನೀಡಿರುವ ಸಂಕ್ಷಿಪ್ತ ಟಿಪ್ಪಣಿಯಲ್ಲಿ, ವಿಮಾನ ನಿಲ್ದಾಣದಲ್ಲಿ ಬಂಧಿಸಲಾದ ನಾಲ್ವರು ಆರೋಪಿಗಳು ಶ್ರೀಲಂಕಾದ ಪ್ರಜೆಗಳಾಗಿದ್ದು, ಇಸ್ಲಾಮಿಕ್ ಸ್ಟೇಟ್‌ನ ಭಯೋತ್ಪಾದಕರು ಎಂದು ಹೇಳಿದೆ.

ಶ್ರೀಲಂಕಾದಿಂದ ಬಂದ ನಾಲ್ವರು ಇಸ್ಲಾಮಿಕ್ ಸ್ಟೇಟ್ ಉಗ್ರರನ್ನು ಬಂಧಿಸಿದ ಗುಜರಾತ್ ಎಟಿಎಸ್
ಬಂಧಿತ ಉಗ್ರರು
Published On :

ಅಹಮದಾಬಾದ್: ಇಲ್ಲಿನ ಸರ್ದಾರ್ ವಲ್ಲಭಾಯಿ ಪಟೇಲ್ ವಿಮಾನ ನಿಲ್ದಾಣದಲ್ಲಿ ಇಸ್ಲಾಮಿಕ್ ಸ್ಟೇಟ್‌ನ ನಾಲ್ವರು ಭಯೋತ್ಪಾದಕರನ್ನು ಬಂಧಿಸಿರುವುದಾಗಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಸೋಮವಾರ ತಿಳಿಸಿದೆ.

ಎಟಿಎಸ್ ನೀಡಿರುವ ಸಂಕ್ಷಿಪ್ತ ಟಿಪ್ಪಣಿಯಲ್ಲಿ, ವಿಮಾನ ನಿಲ್ದಾಣದಲ್ಲಿ ಬಂಧಿಸಲಾದ ನಾಲ್ವರು ಆರೋಪಿಗಳು ಶ್ರೀಲಂಕಾದ ಪ್ರಜೆಗಳಾಗಿದ್ದು, ಇಸ್ಲಾಮಿಕ್ ಸ್ಟೇಟ್‌ನ ಭಯೋತ್ಪಾದಕರು ಎಂದು ಹೇಳಿದೆ.

ಮೂಲಗಳ ಪ್ರಕಾರ, ಪಾಕಿಸ್ತಾನದ ಏಜೆಂಟರು ದಾಳಿಯಲ್ಲಿ ಬಳಸಬಹುದಾದ ಕೆಲವು ಶಸ್ತ್ರಾಸ್ತ್ರಗಳನ್ನು ಅವರಿಗೆ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಶಂಕಿತ ಉಗ್ರರು ಅದಕ್ಕೂ ಮೊದಲೇ ಸಿಕ್ಕಿಬಿದ್ದಿದ್ದಾರೆ.

ಬಂಧಿತ ನಾಲ್ವರು ಶ್ರೀಲಂಕಾದಿಂದ ಚೆನ್ನೈ ಮೂಲಕ ಅಹಮದಾಬಾದ್ ತಲುಪಿದ್ದಾರೆ ಎನ್ನಲಾಗಿದೆ. ಗುರಿ ತಲುಪುವ ಮುನ್ನವೇ ಅವರನ್ನು ಎಟಿಎಸ್ ಬಂಧಿಸಿದೆ.

ಈ ಬಂಧನಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ಎಟಿಎಸ್ ಅಲ್ ಖೈದಾದೊಂದಿಗೆ ಸಂಪರ್ಕ ಹೊಂದಿದ್ದ ಮೂವರನ್ನು ರಾಜ್‌ಕೋಟ್‌ನಲ್ಲಿ ಬಂಧಿಸಿತ್ತು. ನಿಷೇಧಿತ ಭಯೋತ್ಪಾದಕ ಸಂಘಟನೆಗೆ ಜನರನ್ನು ಪ್ರಚೋದಿಸಲು ಮತ್ತು ನೇಮಕಾತಿ ಮಾಡಲು ಬಾಂಗ್ಲಾದೇಶದ ಹ್ಯಾಂಡ್ಲರ್‌ಗಾಗಿ ಅವರು ಪ್ರಾಥಮಿಕವಾಗಿ ಕೆಲಸ ಮಾಡುತ್ತಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.